ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲಿಯೇ ಸಾವು, ಐವರಿಗೆ ಗಂಭೀರ ಗಾಯ

0
31
loading...

ಕನ್ನಡಮ್ಮ ಸುದ್ದಿ-ಬೆಳಗಾವಿ: ನಗರದ ಹೊರವಲಯದಲ್ಲಿರುವ ಹೊನಗಾ ಹತ್ತಿರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗಾವಿ ಕಡೆಯಿಂದ ಸಂಕೇಶ್ವರ ಕಡೆಗೆ ಹೊರಟಿದ ಟವೆರೋ ಕಾರ್ ಕಬ್ಬು ತುಂಬಿಕೊಂಡುಬ ಹೊರಟಿದ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಇಬ್ಬರು ಸ್ಥಳದಲ್ಲಿ ಮೃತಪಟ್ಟರೇ ಐದು ಜನರಿಗೆ ಗಂಭೀರ ಗಾಯವಾಗಿದೆ.

ಮೃತಪಟ್ಟಿರುವವರ ಕುರಿತು ಯಾವುದೇ ಮಾಹಿತಿ ತಿಳದಿಲ್ಲ. ವೇಗವಾಗಿ ಚಲಾಯಿಸುತ್ತಿದ್ದ ಕಾರ್ ಡಬಲ್ ಟೈಲರ್ ಕಬ್ಬು ತುಂಬಿಕೊಂಡು ಹೊರಟಿದ ಟ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದ್ದು, ಐದು ಜನ ಗಂಭೀರವಾಗಿ ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ಕಾಕತಿ ಪೊಲೀಸರು ಭೇಟಿ ನೀಡಿ‌ ಪರಿಶೀಲನೆ ಮಾಡುತ್ತಿದ್ದಾರೆ.

loading...