ರಾಜ್ಯ ಸರಕಾರ ಎಲ್ಲ ರಂಗಗಳಲ್ಲಿಯೂ ವಿಫಲ: ಯಡಿಯೂರಪ್ಪ

0
25
loading...

ನಿಪ್ಪಾಣಿ 22: ಕೇಂದ್ರ ನೀಡಿದ ಸೌಲಭ್ಯಗಳನ್ನು ಸರಿಯಾಗಿ ಉಪಯೋಗಿಸದ ರಾಜ್ಯದ ಸಿದ್ದರಾಮಯ್ಯ ಸರಕಾರ ಎಲ್ಲ ರಂಗಗಳಲ್ಲೂ ವಿಫಲಗೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಪಟ್ಟಣದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ಹಮ್ಮಿಕೊಂಡ ನವಕರ್ನಾಟಕದ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು. ಬೆಳಗಾವಿ ನಗರವು ಸ್ಮಾರ್ಟ ಸಿಟಿಗೆ ಸೇರಿದ್ದರೂ ಇಂದು ರಾಜ್ಯ ಸರಕಾರ ಬೆಳಗಾವಿಯನ್ನು ಕಡೆಗಣಿಸಿ ಅಭಿವೃಧ್ಧಿಪಡಿಸುವಲ್ಲಿ ವಿಫಲವಾಗಿದೆ. ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚನಮ್ಮಾ ಹೆಸರಿಡಬೇಕಾದ ಅವಶ್ಯಕತೆವಿದ್ದು ಮುಂಬರುವ ದಿನಗಳಲ್ಲಿ ಆ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು. ಸ್ವಚ್ಛ ದಕ್ಷ ಪ್ರಾಮಾಣಿಕ ಭಷ್ಟಾಚಾರ ರಹಿತ ಆಡಳಿತವನ್ನು ನೀಡಲು ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಕರೆ ನೀಡಿದರು.
ವೇದಿಕೆ ಮೇಲೆ ಸಂಸದೆ ಶೋಭಾ ಕರಂದ್ಲಾಜೆ, ಜೊಲ್ಲೆ ಉದ್ಯೋಗ ಸಮೂಹ ಸಂಸ್ಥಾಪಕ ಅಣ್ಣಾಸಾಹೇಬ ಜೊಲ್ಲೆ, ಶಾಸಕರಾದ ಉಮೇಶ ಕತ್ತಿ, ಮಾಜಿ ಸಚಿವ ಶಶಿಕಾಂತ ನಾಯಿಕ,ಮುಖಂಡರಾದ ರವಿಕುಮಾರ, ವಾಮನ ಆಚಾರ್ಯ, ಜಯವಂತ ಭಾಟಲೆ, ಸಂಜಯ ಶಿಂತ್ರೆ, ಅಪ್ಪಾಸಾಹೇಬ ಜೊಲ್ಲೆ, ಬಸವಪ್ರಸಾದ ಜೊಲ್ಲೆ, ಜ್ಯೋತಿಪ್ರಸಾದ ಜೊಲ್ಲೆ, ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಪಾಲ್ಗೊಂಡಿದ್ದರು.
ರಮೇಶ ಪಾಟೀಲ ನಿರೂಪಿಸಿದರು. ಮಾಜಿ ಸಚಿವ ಶಶಿಕಾಂತ ನಾಯಿಕ

loading...