ಸಿಎಂ ವಿರುದ್ಧ ಕಾರಜೋಳ ಕಿಡಿ

0
30
loading...

ಬಾಗಲಕೋಟೆ : ಕೃಷ್ಣಾ ಮೇಲ್ದಂಡೆ ಹೆಸರಿನಲ್ಲಿ ಪಾದಯಾತ್ರೆ ನಡೆಸಿ, ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ಸರ್ಕಾರಕ್ಕೆ, ಸಂತ್ರಸ್ತರ ಬೇಡಿಕೆ-ಈಡೇರಿಕೆಗೆ ಬಿಜೆಪಿ ಮುಖಂಡರು ರಾಜ್ಯ ಸರ್ಕಾರಕ್ಕೆ ನವಂಬರ್ 20ಕ್ಕೆ ಡೆಡ್‍ಲೈನ್ ನೀಡಿದ್ದಾರೆ.
ನ.20 ರ ಒಳಗಾಗಿ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆಯಾಗಿ ಕೂಡಲೇ ಯೋಜನೆಗೆ ಅನುಮೋದನೆ ನೀಡಿರುವ 51 ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕು. ಇಲ್ಲದಿದ್ದಲ್ಲಿ, ನ.21 ರಂದು ಬಾಗಲಕೋಟೆ ವಿಜಯಪುರ ಅವಳಿ ಜಿಲ್ಲೆಯ 10 ಸಾವಿರಕ್ಕೂ ಅಧಿಕ ಸಂತ್ರಸ್ತರ ಜೊತೆಗೂಡಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಮಾಜಿ ಸಚಿವ, ಶಾಸಕ ಗೋವಿಂದ ಕಾರಜೋಳ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲೆಯ ಬಿಜೆಪಿ ಮುಖಂಡರು ಹಾಗೂ ಮುಳುಗಡೆ ಸಂತ್ರಸ್ತರ ಹೋರಾಟ ಸಮಿತಿ ಅಧ್ಯಕ್ಷರ ಜೊತೆಗೂಡಿ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಕಳೆದ ತಿಂಗಳು ಕೃಷ್ಣಾ ಮೇಲ್ದಂಡೆ ಯೋಜನೆ ಹಂತ ಮೂರಕ್ಕೆ ಸರ್ಕಾರ 51 ಸಾವಿರ ರೂ.ಗಳಿಗೆ ಅನುಮೋದನೆ ನೀಡಿದೆ. ಕೂಡಲೇ ಮುಳುಗಡೆಯಾಗುವ ಜಮೀನು, ಕಟ್ಟಡಗಳಿಗೆ ಪರಿಹಾರ ಮತ್ತು ಪುನರ್ವಸತಿಗೆ ಅಗತ್ಯ ಇರುವ 30 ಸಾವಿರ ಕೋಟಿ ರೂ. ವಿತರಿಸಬೇಕು. ಇಲ್ಲವಾದಲ್ಲಿ ಸುವರ್ಣಸೌಧ ಮುತ್ತಿಗೆ ಹಾಕುವುದು ಖಂಡಿತ ಎಂದ ಅವರು, ಭೂಮಿ ಕಳೆದುಕೊಳ್ಳುವ ರೈತರಿಗೆ ಮಾರುಕಟ್ಟೆ ಬೆಲೆ ಆಧರಿಸಿ ಎಲ್ಲ ಸಂತ್ರಸ್ತರಿಗೂ ಏಕರೂಪ ಬೆಲೆ ನಿಗದಿಪಡಿಸಬೇಕು ಎಂದರು.

loading...