ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಕೇಂದ್ರ ಸಚಿವ ಹೆಗಡೆ

0
21
loading...

ಕನ್ನಡಮ್ಮ ಸುದ್ದಿ
ಬೆಳಗಾವಿ: 17 ಮತಕ್ಕಾಗಿ ಮತ್ತು ಅಧಿಕಾರಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಬ್ಬರ ಬೂಟು ನೆಕ್ಕಲು ಹಿಂಜರಿಯುವುದಿಲ್ಲ ಎಂದು ಕೇಂದ್ರ ಸಚಿವ ಅನಂತಕುಮಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಅವರು ಶುಕ್ರವಾರ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಬಿಜೆಪಿ ನವ ಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆಯ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
ಟಿಪ್ಪು ಜಯಂತಿಯನ್ನು ಸ್ವ ಪ್ರತಿಷ್ಠೆಯಾಗಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿರುವ ಮಹನೀಯರೇಕೆ ನೆನಪಾಗುತ್ತಿಲ್ಲ ಎಂದು ಪ್ರಶ್ನಿಸಿದ ಅವರು, ಮುಂದೊಂದು ದಿನ ಉಗ್ರಗಾಮಿಗಳಾದ ಕಸಬ್, ಲಾಡೆನ್ ಹಾಗೂ ಹೈದರಾಲಿ ಸೇರಿದಂತೆ ದೇಶದ್ರೋಹಿಗಳ ಜನ್ಮದಿನವನ್ನು ಆಚರಿಸಿ ಮೇಣ ಬತ್ತಿ ಹಿಡಿದರೂ ಆಶ್ಚರ್ಯ ಪಡಬೇಕಾಗಿಲ್ಲ ಎಂದು ಹೇಳಿ‌ ಕಾರ್ಯಕರ್ತರಿಗೆ ಹೇಳಿದರು.
ಇಂಥ ಜಯಂತಿಯನ್ನು ಆಚರಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರಕಾರ ಇದೊಂದು ಧರ್ಮದ್ರೋಹಿ ಸರ್ಕಾರವಾಗಿದೆ ಅಲ್ಲದೆ ಮತ ಮತ್ತು ಅಧಿಕಾರಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಬ್ಬರ ಬೂಟು ನೆಕ್ಕಲು ಹಿಂಜರಿಯುವುದಿಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

loading...