ಸಿದ್ದರಾಮಯ್ಯನ ಮೇಲೆ ಬಿಎಸ್‍ವೈ ವಾಕ್ ಪ್ರವಾಹ

0
26
loading...

ಮುಂಡಗೋಡ: ರಾಜ್ಯದಲ್ಲಿ ಸಂಚರಿಸುತ್ತಿರುವ ಬಿಜೆಪಿ ಪರಿವರ್ತನಾ ಯಾತ್ರೆ ಕೇವಲ ಯಡಿಯೂರಪ್ಪನನ್ನು ಮುಖ್ಯಮಂತ್ರಿಯನ್ನಾಗಿಸುವುದಕ್ಕಲ್ಲ. ಬದಲಾಗಿ ಸಿದ್ದರಾಮಯ್ಯ ದುರಾಡಳಿತದ ಸರ್ಕಾರವನ್ನು ಕಿತ್ತೊಗೆದು ಸುಭದ್ರ ಸರ್ಕಾರ ರಚನೆ ಮಾಡುವ ಉದ್ದೇಶ ನಮ್ಮದಾಗಿದೆ ಎಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಗುರುವಾರ ಇಲ್ಲಿಯ ತಾಲೂಕಾ ಕ್ರೀಡಾಂಗಣದಲ್ಲಿ ಬಿ.ಜೆ.ಪಿ ಹಮ್ಮಿಕೊಂಡಿದ್ದ ಪರಿವರ್ತನಾ ಯಾತ್ರೆಯ ಸಾರ್ವಜನಿಕ ಸಮಾವೇಶ ಉದ್ಘಾಟಿಸಿ ಮಾತನಾಡುತ್ತಿದ್ದರು. ನಿರಂತರ ಕೊಲೆ, ಸುಲಿಗೆ ಲೂಟಿ ಮಾಡುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ನಿರತವಾಗಿದೆ. ಲಕ್ಷಾಂತರ ಕೋಟಿ ರೂಪಾಯಿ ಸಾಲ ಮಾಡಿಕೊಂಡಿರುವ ಸಿದ್ದರಾವiಯ್ಯ ಸರ್ಕಾರ ರಾಜ್ಯದ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರ ಸಹಾಯಕರಿಗೆ ಸಂಬಳ ನೀಡಲಾಗದಷ್ಟು ದಿವಾಳಿಯಾಗಿದೆ. ಹೀಗೇ ಬಿಟ್ಟರೆ ವಿಧಾನಸೌದವನ್ನು ಕೂಡ ಒತ್ತೆ ಇಡುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ಮುಕ್ತ ಭಾರತವಾಗಬೇಕಾದರೆ ಕರ್ನಾಟಕವೂ ಕಾಂಗ್ರೆಸ್ ಮುಕ್ತವಾಗಬೇಕು. ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಯಲ್ಲಾಪುರ-ಮುಂಡಗೋಡ ವಿಧಾನಸಭಾ ಕ್ಷೇತ್ರಕ್ಕೆ 11 ಸಾವಿರ ಆಶ್ರಯ ಮನೆಗಳನ್ನು ನೀಡಲಾಗಿತ್ತಲ್ಲದೇ, ಕ್ಷೇತ್ರದ ಅಭಿವೃದ್ಧಿಗೆ 500 ಕೋಟಿ ಹಣ ನೀಡಲಾಗಿತ್ತು. ಈಗಿನ ಶಾಸಕರು ಎಷ್ಟು ಅನುದಾನ ತಂದು ಅಭಿವೃದ್ಧಿ ಮಾಡಿದ್ದಾರೆಂದು ಜನರು ಪ್ರಶ್ನಿಸಬೇಕಿದೆ.

ರಾಜ್ಯದಲ್ಲಿ ಬಿ.ಜೆ.ಪಿ. ಅಧಿಕಾರದ ಚುಕ್ಕಾಣಿ ಹಿಡಿಯುವ ಎಲ್ಲ ಲಕ್ಷಣಗಳು ಗೋಚರಿಸತೊಡಗಿದೆ. ಕಾಂಗ್ರೆಸ ದುರಾಡಳಿತದಿಂದಾಗಿ ಬೇಸತ್ತ ಜನತೆ ಬಿ.ಜೆ.ಪಿ ಯತ್ತ ಚಿತ್ತ ಹರಿಸಿದ್ದಾರೆ ಎಂದು ಹೇಳಿದ ಅವರು, ರಾಜ್ಯದಲ್ಲಿ ಬಿ.ಜೆ.ಪಿ. ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮರಾಠಾ ಸಮಾಜವನ್ನು 2ಎಗೆ ಸೇರಿಸುತ್ತೇವೆ ಎಂದು ಭರವಸೆ ನೀಡಿದರು. ಕೇಂದ್ರ ಕೌಶಲ್ಯಾಭಿವೃದ್ದಿ ಮತ್ತು ಉದ್ಯಮಶೀಲತೆ ಸಚಿವ ಅನಂತಕುಮಾರ ಹೆಗಡೆ ಮಾತನಾಡಿ, ಯತಾ ರಾಜಸಿದ್ದಣ್ಣ ಒಂದು ಲೂಟಿ ಮಾಡುವ ಕೆಲಸದಲ್ಲಿ ಇಲ್ಲವೆ ನಿದ್ದೆ ಮಾಡುವ ಕೆಲಸದಲ್ಲಿ ತೊಡಗುತ್ತಾರೆ ಪ್ರಜಾ ಎಂಬಂತೆ ಮುಖ್ಯಮತ್ರಿ ಸಿದ್ದಣ್ಣನಂತೆಯೇ ನಮ್ಮ ವ್ಯವಸ್ಥೆ ಸಾಗಿದೆ ಎಂದು ಲೇವಡಿ ಮಾಡಿದ ಅವರು, ಕೇಂದ್ರ ಸರ್ಕಾರ ನೀಡಿದ ಕೋಟ್ಯಂತರ ಹಣವನ್ನು ನುಂಗಿ ಹಾಕುವ ಪ್ರಯತ್ನ ರಾಜ್ಯ ಸರ್ಕಾರ ಮಡುತ್ತಿದೆ. ಅಧಿಕಾರದ ಹೆಸರಿನಲ್ಲಿ ಕಾಂಗ್ರೆಸ್ ತನ್ನ ತೀಟೆ ತೀರಿಸಿಕೊಳ್ಳುವ ಕೆಲಸ ಮಾಡುತ್ತದೆ. ಸಿದ್ದರಾಮಯ್ಯ ಸರ್ಕಾರದಲ್ಲಿ ದಿನಕ್ಕೊಂದು ಹಗರಣಗಳು ಬಯಲಿಗೆ ಬರುತ್ತಿವೆ. ಹೊಟ್ಟೆ ಬಟ್ಟೆ ಮಾತ್ರವಲ್ಲದೇ ಆತ್ಮಾಭಿಮಾನ ಕೂಡ ಇರುತ್ತದೆ. ಅದು ಜಾಗೃತವಾಗಬೇಕಾದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಆಡಳಿತಕ್ಕೆ ಬರಬೇಕಿದೆ ಎಂದು ಹೇಳಿದರು. ಸಂಸದ ಪ್ರಹ್ಲಾದ ಜೋಶಿ, ಮಾಜಿ ಸಚಿವ ಕುಮಾರ ಬಂಗಾರಪ್ಪ, ಸಿ.ಎಮ್.ಉದಾಸಿ, ಮಾಜಿ ಶಾಸಕ ವಿ.ಎಸ್.ಪಾಟೀಲ, ಜಿ.ಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಎಲ್.ಟಿ.ಪಾಟೀಲ, ಮಾಜಿ ವಿಧಾನ ಪರಿಷತ್ ಸದಸ್ಯ ಅಶ್ವತ್ಥ ನಾರಾಯಣ ಮಾತನಾಡಿದರು. ಸಂಸದೆ ಶೋಭಾ ಕರಂದ್ಲಾಜೆ, ಜಿಲ್ಲಾ ಉಸ್ತುವಾರಿ ತಿಂಗಳೆ ವಿಕ್ರಮಾದಿತ್ಯ, ಜಿಲ್ಲಾ ಬಿ.ಜೆ.ಪಿ. ಅಧ್ಯಕ್ಷ ಕೆ.ಜಿ.ನಾಯ್ಕ, ರಾಮು ರಾಯ್ಕರ, ಪ್ರಮೋದ ಹೆಗಡೆ, ರವಿಕುಮಾರ ಮುಂತಾದವರಿದ್ದರು. ತಾಲೂಕಾ ಬಿ.ಜೆ.ಪಿ. ಅಧ್ಯಕ್ಷ ಗುಡ್ಡಪ್ಪಾ ಕಾತೂರ ಸ್ವಾಗತಿಸಿದರು. ಅಶೋಕ ಚಲವಾದಿ ಕಾರ್ಯಕ್ರಮ ನಿರೂಪಿಸಿದರು. ರಾಮು ನಾಯ್ಕ ವಂದಿಸಿದರು.

loading...