ಸ್ವ-ಉದ್ಯೋಗಕ್ಕೆ ಮಹತ್ವವಿದೆ: ಲಕ್ಷ್ಮೀಕಾಂತ

0
29
loading...

ಕನ್ನಡಮ್ಮ ಸುದ್ದಿ-ಬೆಳಗಾವಿ: ತರಬೇತಿ ಮುಕ್ತಾಯದ ನಂತರದ ದಿನದಿಂದಲೇ ಉದ್ಯೂಗವನ್ನು ಆರಂಭಿಸಿರಿ ಅದರಿಂದ ನಿಮ್ಮ ಜ್ಞಾನ ಇನ್ನಷ್ಟು ವೃದ್ದಿಯಾಗಲು ಸಾಧ್ಯ. ಪ್ರಸ್ತುತ ದಿನ ಸ್ವ-ಉದ್ಯೋಗಕ್ಕೆ ಎಲ್ಲಿಲ್ಲದ ಮಹತ್ವ ಇದೆ ಎಂದು ಸಿಂಡ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ಲಕ್ಷ್ಮೀಕಾಂತ ಪಾಟೀಲ ಹೇಳಿದರು.
ಇತ್ತೀಚೆಗೆ ಸಿಂಡ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಕೈ-ಮಗ್ಗ ಮತ್ತು ಜವಳಿ ಇಲಾಖೆ ಸಹಯೋಗದಲ್ಲಿ ನಗರದ ಕೈ-ಮಗ್ಗ ಮತ್ತು ಜವಳಿ ಇಲಾಖೆಯ ಪಲಾನುಭವಿಗಳಿಗೆ ಸಿಂಡ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಹಮ್ಮಿಕೊಂಡಂತಹ ಆರು ದಿನಗಳ ಉದ್ಯಮಶೀಲತಾ ತರಬೇತಿ ಸಮಾರೋಪ ಸಮಾರಂಭ ಮಾತನಾಡಿದರು.
ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳು ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿವೆ ಅವುಗಳನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡು ಶ್ರದ್ಧೆ, ಭಕ್ತಿ ಮತ್ತು ಪ್ರಾಮಾಣಿಕತನದಿಂದ ಉದ್ಯಮವನ್ನು ಆರಂಭಿಸಿ ಯಶಸ್ವಿ ವ್ಯಕ್ತಿಗಳಾಗಿ ಮತ್ತು ಪ್ರಸ್ತುತ ದಿನ ಉದ್ಯೋಗದಲ್ಲಿ ಪ್ರಗತಿ ಹಾಗೂ ಯಶಸ್ಸನ್ನು ಕಾಣಲು ನಿಮ್ಮ ಜ್ಞಾನ ಹಾಗೂ ಕೌಶಲ್ಯವನ್ನು ನವೀಕರಿಸುತ್ತಾ ಸಾಗಬೇಕು ಮತ್ತು ಸಾಲ ಅಥವಾ ಸಹಾಯಧನ ಮತ್ತು ತರಬೇತಿಯನ್ನು ಪಡೆದ ಬ್ಯಾಂಕ್ ಮತ್ತು ಸಂಸ್ಥೆಯೊಂದಿಗೆ ನಿಕಟ ಸಂಪರ್ಕದಲ್ಲಿದ್ದು ಆಗಾಗ ಹೆಚ್ಚಿನ ಮಾಹಿತಿಯನ್ನು ಪಡೆದುಕೂಳ್ಳಬೇಕು ಎಂದರು.
ನಂತರ ಶಿಬಿರಾರ್ಥಿಗಳು ತರಬೇತಿ ಅನುಭವಗಳನ್ನು ಹಂಚಿಕೂಂಡರು. ಸಿಂಡ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ಲಕ್ಷ್ಮೀಕಾಂತ ಪಾಟೀಲ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು.
ಸಂಸ್ಥೆಯ ಸಿಬ್ಬಂದಿ ಬಸವರಾಜ ಕುಬಸದ ಮತ್ತು ಅಬ್ದುಲ್ ರಜಾಕ್ ಮತ್ತಿತರರು ಉಪಸ್ಥಿತರಿದ್ದರು.
ಸಿಂಡ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯ ಉಪನ್ಯಾಸಕಿ ರಾಜೇಶ್ವರಿ ದೇವಲಾಪುರ ಸ್ವಾಗತಿಸಿದರು, ಉಪನ್ಯಾಸಕ ಚಂದ್ರಕಾಂತ ಹಿರೇಮಠ ನಿರೂಪಿಸಿ, ವಂದಿಸಿದರು.

loading...