18 ರಂದು ಗೋಕಾಕದಲ್ಲಿ ಪರಿವರ್ತನಾ ಯಾತ್ರೆ

0
19
loading...

ಕನ್ನಡಮ್ಮ ಸುದ್ದಿ-ಗೋಕಾಕ: ರಾಜ್ಯದ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತೆಸೆಯಲು ಬಿಜೆಪಿ ಪಕ್ಷ ನವಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆಯನ್ನು ನಗರದಲ್ಲಿ 18 ರಂದು ಸಂಜೆ ವಾಲ್ಮೀಕಿ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮುಖಂಡ ಅಶೋಕ ಪೂಜಾರಿ ಹೇಳಿದರು.
ನಗರದಲ್ಲಿ ಕರೇದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಗೋಕಾಕ ಮತಕ್ಷೇತ್ರದ ರಾಜಕೀಯ ವ್ಯವಸ್ಥೆ ಬದಲಾವಣೆ ತರಲು ಪರಿವರ್ತನಾ ಯಾತ್ರೆಯಲ್ಲಿ ಸುಮಾರು 20ಸಾವಿರ ಜನ ಪಾಲ್ಗೊಳ್ಳಲು ವ್ಯವಸ್ಥೆ ಮಾಡಲಾಗಿದೆ ಎಂದರು. ಈ ಪರಿವರ್ತನಾ ಯಾತ್ರೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಅನಂತಕುಮಾರ ಹೆಗಡೆ, ಕೆ ಎಸ್. ಈಶ್ವರಪ್ಪ, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ, ಶೋಭಾ ಕರಂದ್ಲಾಜೆ ಸೇರಿದಂತೆ ರಾಜ್ಯ ಬಿಜೆಪಿ ಮುಖಂಡರುಗಳು, ಜಿಲ್ಲೆಯ ಹಾಲಿ, ಮಾಜಿ ಶಾಸಕರು ಹಾಗೂ ಮುಖಂಡರು ಈ ಪರಿವರ್ತನಾ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ ವಾಲ್ಮೀಕಿವೃತ್ತದಿಂದ ಮೆರವಣಿಗೆ ಮೂಲಕ ಬಿಜೆಪಿ ಮುಖಂಡರನ್ನು ಕರೆತರಲಾಗುವದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಎಮ್ ಎಲ್. ಮುತ್ತೇನ್ನವರ, ಬಿಜೆಪಿ ನಗರಾಧ್ಯಕ್ಷ ಶಶಿಧರ ದೇಮಶೇಟ್ಟಿ, ಚಿದಾನಂದ ದೇಮಶೆಟ್ಟಿ, ಶಾಮಾನಂದ ಪೂಜೇರಿ, ಬಸವರಾಜ ಹಿರೇಮಠ, ಶಕೀಲ ಧಾರವಾಡಕರ, ಲಕ್ಕಪ್ಪ ತಹಶೀಲ್ದಾರ, ಸುನೀಲ ಮುರ್ಕಿಬಾವಿ, ಅಡಿವೆಪ್ಪ ಮರಲಿಂಗನವರ, ಬಸವರಾಜ ಹುಳ್ಳೇರ ಇದ್ದರು.

loading...