ಅಂಗವಿಕಲರ ಸಮಸ್ಯೆಗೆ ಸ್ಪಂದನೆ: ಸಚಿವ ದೇಶಪಾಂಡೆ

0
24
loading...

ಕನ್ನಡಮ್ಮ ಸುದ್ದಿ-ಹಳಿಯಾಳ: ವಿಶ್ವ ಅಂಗವಿಕಲರ ದಿನಾಚರಣೆಯ ಅಂಗವಾಗಿ ಶುಕ್ರವಾರದಂದು ತಾಲೂಕ ಪಂಚಾಯತ ಸಭಾಭವನದಲ್ಲಿ ನವೋದಯ ಅಂಗವಿಕಲರ ಕ್ಷೇಮಾಭಿವೃದ್ಧಿ ಟ್ರಸ್ಟ್‌ ವತಿಯಿಂದ ಸಮಾರಂಭವು ಜರುಗಿತು.
ಬೃಹತ್‌ ಕೈಗಾರಿಕೆ ಸಚಿವ ಆರ್‌.ವಿ. ದೇಶಪಾಂಡೆ ಮಾತನಾಡುತ್ತಾ ಅಂಗವಿಕಲರ ಯಾವುದೇ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿ ಪರಿಹರಿಸುವ ಕಾರ್ಯ ಮಾಡಲಾಗಿದೆ. ಸರ್ಕಾರದ ಸೌಲಭ್ಯಗಳ ಜೊತೆಗೆ ಕೈಗಾರಿಕೋದ್ಯಮಿಗಳ ಸಹಕಾರದಿಂದ ವಿಶೇಷವಾಗಿ ವಿನ್ಯಾಸಗೊಳಿಸಿರುವ ಸ್ಕೂಟರ್‌ಗಳನ್ನು, ಸಾಧನ-ಸಲಕರಣೆಗಳನ್ನು ನೀಡಲಾಗಿದೆ ಎಂದು ಹೇಳಿದರು.
ವಿಧಾನ ಪರಿಷತ್‌ ಸದಸ್ಯ ಎಸ್‌.ಎಲ್‌. ಘೋಟ್ನೇಕರ ತಮ್ಮ ಭಾಷಣದಲ್ಲಿ ತಾವು ಅಂಗವಿಕಲರು ಎಂಬ ಕೀಳರಿಮೆ ಮನಸ್ಸಿನಿಂದ ಕಿತ್ತು ಹಾಕಬೇಕು ಎಂದು ಕಿವಿಮಾತು ಹೇಳಿದರು.
ಜಿಲ್ಲಾ ಪಂಚಾಯತ ಉಪಾಧ್ಯಕ್ಷ ಸಂತೋಷ ರೇಣಕೆ, ಸದಸ್ಯರಾದ ಕೃಷ್ಣಾ ಪಾಟೀಲ, ಲಕ್ಷ್ಮೀ ಸುಭಾಸ ಕೋರ್ವೆಕರ, ತಾಲೂಕಾ ಪಂಚಾಯತ ಅಧ್ಯಕ್ಷೆ ರೀಟಾ ಸಿದ್ಧಿ, ಉಪಾಧ್ಯಕ್ಷೆ ನೀಲವ್ವಾ ಮೋಹನ ಮಡಿವಾಳ, ಪುರಸಭೆ ಅಧ್ಯಕ್ಷ ಉಮೇಶ ಬೋಳಶೆಟ್ಟಿ, ನವೋದಯ ಅಂಗವಿಕಲರ ಕ್ಷೇಮಾಭಿವೃದ್ಧಿ ಟ್ರಸ್ಟ್‌ ಅಧ್ಯಕ್ಷ ದೇಮಣ್ಣಾ ಬಿರ್ಜೆ ವೇದಿಕೆಯಲ್ಲಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಸುವರ್ಣಾ ಗುರವ ನಿರೂಪಿಸಿದರು.

loading...