ಅರಾಜಕತೆ ಸೃಷ್ಟಿ ಬಿಜೆಪಿ ಅಜೆಂಡಾ..!

0
19
loading...


ವಿಜಯಪುರ: ರಾಜ್ಯದಲ್ಲಿ ಅರಾಜಕತೆ ಸೃಷ್ಟಿ ಮಾಡುವುದೇ ಬಿಜೆಪಿಯ ಪ್ರಮುಖ ಅಜೆಂಡಾವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ ಗುಂಡೂರಾವ್ ಆರೋಪಿಸಿದರು.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರವಾರದ ಕುಮಟಾ, ಶಿರಸಿಯಲ್ಲಿ ಕೋಮುಗಲಭೆಯಲ್ಲಿ ಭಾಗಿಯಾದವರ ವಿರುದ್ ಕ್ರಮ ಕೈಗೊಳ್ಳುವುದು ಪೊಲೀಸ್ ಇಲಾಖೆಯ ಕೆಲಸ ಕಾರ್ಯಮಾಡುತ್ತದೆ. ಬಿಜೆಪಿ ಕಾರ್ಯಕರ್ತರೇ ಕೋಮುಗಲಭೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಇಡೀ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸುವುದು, ಕೋಮುಗಲಭೆ ಸೃಷ್ಟಿಸುವುದೇ ಬಿಜೆಪಿ ಪರಿವರ್ತನಾ ರ್ಯಾಲಿ ಮೂಲ ಉದ್ದೇಶವಾಗಿದೆ, ಬಿಜೆಪಿ ಕೆಟ್ಟ ವಾತಾವರಣ ನಿರ್ಮಾಣ ಮಾಡುವ ಕೆಲಸ ಮಾಡುತ್ತಿದೆ, ಬೇಜವಾಬ್ದಾರಿ ರೀತಿಯಲ್ಲಿ ಕೆಲಸ ಮಾಡುತ್ತಿದೆ. ಬಿಜೆಪಿ ಗಲಾಟೆ ಮಾಡುಸುತ್ತದೆ. ಇದು ಉದ್ದೇಶಪೂರ್ವಕವಾಗಿ ಆಸೆ ಪಡುತ್ತಿದೆ ಎಂದು ದೂರಿದರು.

loading...