ಕಳಸಾ ಬಂಡೂರಿ ಅನುಷ್ಠಾನಕ್ಕೆ ಮೂರು ರಾಜಕೀಯ ಪಕ್ಷಗಳು ಕಡೆಗಣಿಸಿವೆ: ಕುಲಕರ್ಣಿ

0
24
loading...

ಕನ್ನಡಮ್ಮ ಸುದ್ದಿ
ಬೆಳಗಾವಿ:5 ಕಳಸಾ ಬಂಡೂರಿ ಹಾಗೂ ಮಹದಾಯಿ ನದಿ ಜೋಡಣೆಯ ವಿಷಯದಲ್ಲಿ ಮೂರು ರಾಜಕೀಯ ಪಕ್ಷಗಳು‌ ಉತ್ತರ ಕರ್ನಾಟಕವನ್ನು ಕಡೆಗಣಿಸಿದ್ದಾರೆ ಎಂದು ಕಳಸಾ ಬಂಡೂರಿ ಹೋರಾಟಗಾರ ವಿಜಯ ಕುಲಕರ್ಣಿ ಅಸಮಾಧಾನ ವ್ಯಕ್ತಪಡಿಸಿದರು.
ಅವರು ಮಂಗಳವಾರ ನಗರದ ಸಾಹಿತ್ಯ ಭವನದಲ್ಲಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ, ಮುಂದಿನ ದಿನ ಮಾನಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ಉತ್ತರ ಕರ್ನಾಟಕ ಜನರು ಪಾಠ ಕಲಿಸಬೇಕಾಗಿದೆ. ಮೂರು ರಾಜಕೀಯ ಪಕ್ಷಗಳು ಈ‌‌‌ ಭಾಗವನ್ನು ಸಂಪೂರ್ಣ ಕಡೆಗಣಿಸಿವೆ ಎಂದರು.
ಮೂರು ಪಕ್ಷಗಳು ಮಹದಾಯಿ ನೀರು ಹರಿಸುವುದಾಗಿ ಭರವಸೆ ನೀಡುತ್ತಿದ್ದಾರೆ ವಿನಃ ಅನುಷ್ಠಾನಗೊಳಿಸಲು ಹಿಂದೆಟ್ಟು ಹಾಕುತ್ತಿದ್ದಾರೆ. ಮೇಕೆದಾಟು ನೀರಿನ ಯೋಜನೆ ಮಾಡಿಕೊಡತ್ತಾರೆ. ಆದ್ರೆ ಉತ್ತರ ಕರ್ನಾಟಕದಲ್ಲಿ ಏಳುವರೆ ಟಿಎಂಸಿ ಮಹದಾಯಿ ನೀರು ಹರಿಸುವಂತೆ ಕಳೆದ 20 ವರ್ಷಗಳಿಂದ ಹೋರಾಟ ನಡೆಸಿದರೂ ಸ್ಪಂದಿಸುತ್ತಿಲ್ಲ. ಡಿಸೆಂಬರ 15ರೊಳಗಾಗಿ ಮಹಾದಾಯಿ ನೀರು ಹರಿಸುವುದು ಸ್ಪಷ್ಟ ನಿರ್ಧಾರ ತೆಗೆದುಕೊಳ್ಳದಿದ್ದಲ್ಲಿ ಸಮಾವೇಶದಲ್ಲಿ ತಕ್ಕ ಪಾಠ ಕಲಿಸುವುದಾಗಿ ಎಚ್ಚರಿಸಿದರು.
ಉತ್ತರ ಕರ್ನಾಟದ ವಿಷಯದಲ್ಲಿ ಸರಕಾರದ ಮಲತಾಯಿ ಧೋರಣೆ ಹಾಗೂ ಕಳಸಾ ಬಂಡೂರಿ‌ ಮಹದಾಯಿ ವಿಚಾರವಾಗಿ ದಿ. 15 ರಂದು ಬೆಂಗಳೂರಿನಲ್ಲಿ ರೈತ ಸಂಘಟನೆಗಳ ಪದಾಧಿಕಾರಿಗಳ ಬೃಹತ ರಾಜ್ಯ ಮಟ್ಟದ ಸಮಾವೇಶ ನಡೆಸಲಾಗುವುದು. ಈ‌ ಸಮಾವೇಶದಲ್ಲಿ ಸುಮಾರು 3 ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ವಿಕಾಸ ಸೋಪ್ಪಿನ ಮಾತನಾಡಿ, ಕಳಸಾ ಬಂಡೂರಿ ನದಿ ಇತ್ಯರ್ಥವಾಗಬೇಕಾದರೆ ರಾಜ್ಯ ಸರಕಾರದ ಜವಾಬ್ದಾರಿ ಪ್ರಮುಖವಾಗಿದೆ. ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ರಾಜ್ಯ ಸರಕಾರದೊಂದಿಗೆ ಚರ್ಚೆ‌ಮಾಡಬೇಕು. ಅದರಂತೆ ಸಿಎಂ ಸಿದ್ದರಾಮಯ್ಯ ಯಡಿಯೂರಪ್ಪ ಅವರೊಂದಿಗೆ ಮಾತನಾಡಿ ನೀರಿನ ಸಮಸ್ಯೆ ಬಗೆ ಹರಿಸುವ ಪ್ರಾಮಾಣಿಕ ಪ್ರಯತ್ನ ನಡೆಸಬೇಕೆಂದರು.
ಸುದ್ದಿಗೋಷ್ಠಿಯಲ್ಲಿ ಡಾ. ಅಯ್ಯಪ್ಪ, ಗುರುರಾಜ ಹುಳ್ಳೆರ, ಟಿ.ಟಿ.ಮುರಕಟ್ನಾಳ, ಶಿವಾನಂದ ಮೇಟಿ ಸೇರಿದಂತೆ ಮೊದಲಾದವರು ಹಾಜರಿದ್ದರು.

loading...