ಚಿಕ್ಕೋಡಿ-ಗೋಕಾಕ ಎರಡೂ iಾಗಲಿ: ಪ್ರಕಾಶ ಹುಕ್ಕೇರಿ

0
25
loading...

ಚಿಕ್ಕೋಡಿ-ಗೋಕಾಕ ಎರಡೂ iಾಗಲಿ: ಪ್ರಕಾಶ ಹುಕ್ಕೇರಿ ಕನ್ನಡಮ್ಮ ಸುದ್ದಿಚಿಕ್ಕೋಡಿ 15: ಚಿಕ್ಕೋಡಿ ಜಿಲ್ಲೆಯಾಗಬೇಕು ಎಂಬುದು ಈ ಭಾಗದ ಜನರ ಬಹುದಿನದ ಬೇಡಿಕೆ. ಈ ಕುರಿತು ಮುಖ್ಯಮಂತ್ರಿಗಳಿಗೆ ಚಿಕ್ಕೋಡಿ ಮತ್ತು ಗೋಕಾಕ ಎರಡನ್ನೂ ಜಿಲ್ಲೆಯನ್ನಾಗಿ ಮಾಡುವಂತೆ ಒತ್ತಾಯ ಮಾಡಲಾಗಿದೆ. ಅದಕ್ಕೆ ಅವರಿಂದಲೂ ಸಕಾರಾತ್ಮಕ ಸ್ಪಂದನೆ ದೊರಕಿದೆ ಎಂದು ಸಂಸದ ಪ್ರಕಾಶ ಹುಕ್ಕೇರಿ ಹೇಳಿದರು. ಪಟ್ಟಣದ ನ್ಯಾಯಾಲಯದ ಆವರಣದಲ್ಲಿರುವ ನ್ಯಾಯವಾದಿಗಳ ಸಂಘದ ಸಭಾಭವನದಲ್ಲಿ ಶುಕ್ರವಾರ ನಡೆದ ಜಿಲ್ಲಾ ಹೋರಾಟ ಸಮಿತಿಯ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇಡೀ ರಾಜ್ಯದಲ್ಲಿಯೇ ಬೆಳಗಾವಿ ಅತಿ ದೊಡ್ಡ ಜಿಲ್ಲೆಯಾಗಿದ್ದು, ಜಿಲ್ಲಾ ವ್ಯಾಪ್ತಿಯಲ್ಲಿ ಈಗಾಗಲೇ 10 ತಾಲೂಕುಗಳು ಅಸ್ತಿತ್ವದಲ್ಲಿದ್ದು, ಬರುವ ಜನೇವರಿ 1 ರಿಂದ ಮತ್ತೇ ನಾಲ್ಕು ಹೊಸ ತಾಲೂಕುಗಳಾಗಲಿದ್ದು, ಒಟ್ಟು 14 ತಾಲೂಕುಗಳಾಗಲಿದ್ದು, ಒಬ್ಬರೇ ಜಿಲ್ಲಾಧಿಕಾರಿಗಳಿಂದ ಸುಗಮ ಆಡಳಿತ ನಡೆಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಬೆಳಗಾವಿ ಜಿಲ್ಲೆ ವಿಭಜನೆ ಮಾಡುವುದು ಅನಿವಾರ್ಯವಾಗಿದೆ. ಆದ್ದರಿಂದ ಸರಕಾರ ಈ ಕುರಿತು ಗಂಭೀರವಾಗಿ ತೆಗೆದುಕೊಂಡು ಬೆಳಗಾವಿ ಜಿಲ್ಲೆ ವಿಭಜನೆ ಮಾಡುವ ಮುಖಾಂತರ ಸರಳ ಆಡಳಿತ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಬೇಕು ಎಂದು ಹೇಳಿದರು. ನ್ಯಾಯವಾದಿಗಳ ಸಂಘ ಮತ್ತು ವಿವಿಧ ಸಂಘಟನೆಗಳು ಚಿಕ್ಕೋಡಿ ಜಿಲ್ಲಾ ಘೋಷಣೆಗಾಗಿ ನಡೆಸುತ್ತಿರುವ ಹೋರಾಟಕ್ಕೆ ನನ್ನದು ಸಂಪೂರ್ಣ ಬೆಂಬಲವಿದೆ. ಹೋರಾಟ ಶಾಂತಿಯುತವಾಗಿ ಇರಲಿ. ಯಾವುದೇ ಅಹಿತಕರ ಘಟನೆಗೆ ಅವಕಾಶ ಕೊಡಬಾರದು ಎಂದು ಮನವಿ ಮಾಡಿದರು.ಚಿಕ್ಕೋಡಿ ಜಿಲ್ಲಾ ಘೋಷಣೆಗಾಗಿ ನಡೆಸುತ್ತಿರುವ ಹೋರಾಟದಲ್ಲಿ ಪಕ್ಷಾತೀತವಾಗಿ ಎಲ್ಲ ರಾಜಕೀಯ ನಾಯಕರು ಮತ್ತು ಸಂಘ-ಸಂಸ್ಥೆಗಳು ಪಾಲ್ಗೊಂಡು ಒಗ್ಗಟಿನಿಂದ ಹೋರಾಟ ನಡೆಸಬೇಕಾಗಿದೆ ಎಂದು ಹೇಳಿದರು.ನ್ಯಾಯವಾದಿಗಳ ಸಂಘ, ಐಎಂಎ, ವಿವಿಧ ಕನ್ನಡಪರ ಸಂಘಟನೆಗಳು ಚಿಕ್ಕೋಡಿ ಜಿಲ್ಲಾ ಘೋಷಣೆ ಮಾಡುವಂತೆ ಸರಕಾರದ ಮೇಲೆ ಒತ್ತಡ ಹೇರುವಂತೆ ಸಂಸದ ಪ್ರಕಾಶ ಹುಕ್ಕೇರಿಯವರಿಗೆ ಮನವಿ ಸಲ್ಲಿಸಿದರು.

loading...