ದಲಿತ ವಿದ್ಯಾರ್ಥಿನಿ ಜಿಶಾ ಅತ್ಯಾಚಾರ, ಕೊಲೆ ಆರೋಪಿಗೆ ಮರಣದಂಡನೆ ಶಿಕ್ಷೆ

0
15
loading...

ಎರ್ನಾಕುಲಂ: ಕೇರಳದ ಕಾನೂನು ವಿದ್ಯಾರ್ಥಿನಿ ಜಿಶಾ ಅತ್ಯಾಚಾರ ಹಾಗು ಕೊಲೆ ಪ್ರಕರಣದ ಆರೋಪಿ ಅಮೀರುಲ್ ಇಸ್ಲಾಂಗೆ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿದೆ.
ಎರ್ನಾಕುಲಂ ಪ್ರಧಾನ ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಎನ್. ಅನಿಲ್ ಕುಮಾರ್ ಅವರು ಅಮೀರುಲ್ ಇಸ್ಲಾಂ ಅಪರಾಧಿ ಎಂದು ಘೋಷಿಸಿದ್ದರು. ಇಂದು ಶಿಕ್ಷೆಯ ಪ್ರಮಾಣ ಘೋಷಿಸಿದ್ದು ಅಪರಾಧಿಗೆ ಮರಣದಂಡನೆ ಶಿಕ್ಷೆ ವಿಧಿಸಿದ್ದಾರೆ.
ಅಸ್ಸಾಂ ಮೂಲದ ವಲಸಿಗ ಕಾರ್ಮಿಕ ಅಮೀರುಲ್ ಇಸ್ಲಾಂ 2016ರ ಏಪ್ರಿಲ್ 28ರಂದು 30 ವರ್ಷದ ದಲಿತ ಯುವತಿ ಜಿಶಾಳ ಮೇಲೆ ಅತ್ಯಾಚಾರ ನಡೆಸಿ, ಬಳಿಕ ಭೀಕರವಾಗಿ ಹತ್ಯೆ ಮಾಡಿದ್ದನು.
ಮೃತದೇಹ ಯುವತಿ ಜಿಶಾ ಮನೆಯ ಕೊಠಡಿಯಲ್ಲಿ ಪತ್ತೆಯಾಗಿದ್ದು, ದೇಹದ ಮೇಲೆ 38 ಗಾಯದ ಗುರುತುಗಳು ಪತ್ತೆಯಾಗಿದ್ದವು. ಈ ಘಟನೆಯನ್ನು ಖಂಡಿಸಿ ರಾಜ್ಯಾದ್ಯಂತ ತೀವ್ರ ಪ್ರತಿಭಟನೆಗಳು ನಡೆದಿದ್ದವು.

loading...