ನೀರಾವರಿ ಯೋಜನೆಗಳು ಕಾಲಮಿತಿಯೊಳಗೆ ಪೂರ್ಣ- ಸಿದ್ದರಾಮಯ್ಯ

0
18
loading...

ಕೊಪ್ಪಳ : ಕೃಷ್ಣಾ ಮೇಲ್ದಂಡೆ ಹಂತ -3 ರಡಿಯಲ್ಲಿ ಬರುವ 9 ಉಪ ಯೋಜನೆಗಳ ಪೈಕಿ 7 ಯೋಜನೆಗಳು ಅನುಷ್ಠಾನದಲ್ಲಿದ್ದು, Pಈ ಭಾಗದ ಮಹತ್ವದ ನೀರಾವರಿ ಯೋಜನೆಯಾಗಿರುವ ಕೊಪ್ಪಳ ಏತ ನೀರಾವರಿಗೆ ಜನೆವರಿ ಅಂತ್ಯದೊಳಗೆ ಟೆಂಡರ್ ಕರೆದು ಕಾಮಗಾರಿಗೆ ಶಿಲಾನ್ಯಾಸ ಮಾಡÀಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು.
ಜಿಲ್ಲೆಯ ಕನಗಗಿರಿಯಲ್ಲಿ ವಿಧಾನ ಸಭಾ ಕ್ಷೇತ್ರದಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಶಂಕುಸ್ಥಾಪನೆ ಹಾಗೂ ಉದ್ಘಾಟಿಸಿ ನುಡಿದಂತೆ ನಡೆದಿದ್ದೇವೆ ಎಂಬ ಸಾಧನಾ ಸಂಭ್ರಮ ಪುಸ್ತಕವನ್ನು ಬೀಡುಗಡೆ ಗೊಳಿಸಿ ಗುರುವಾರ ಸಾರ್ವಜನಿಕ ಬೃಹತ್ ಸಮಾರಂಭದಲ್ಲಿ ಮಾತನಾಡಿದರು.
ಪಾದ ಯಾತ್ರೆ ಮಾಡಿದ ಸಂದರ್ಭದಲ್ಲಿ ಕೊಡಲಸಂಗಮದಲ್ಲಿ ಘೋಷಿಸಿದಂತೆಪ್ರತಿ ವರ್ಷ ಹತ್ತು ಸಾವಿರ ಕೋಟಿ ವೆಚ್ಚ ಐದು ವರ್ಷಗಳಲ್ಲಿ ನೀರಾವರಿ ಯೋಜನೆಗಳಿಗೆ 50 ಸಾವಿರ ಕೋಟಿ ಖರ್ಚು ಮಾಡುತ್ತೇವೆ ಎಂದು ಹೇಳಿದ್ದೇವು. ಈಗ 45 ಸಾವಿರ ಕೋಟಿ ಖರ್ಚು ಮಾಡಲಾಗಿದೆ. ಉತ್ತರ ಕರ್ನಾಟಕಕ್ಕೆ ಮೂರು ಪಟ್ಟು ಹಣ ಖರ್ಚು ಮಾಡಿದ್ದೇವೆ. ಎಂದು ಹೇಳಿದರು.
ಬಿಜೆಪಿ ಸರ್ಕಾರದ ಆಡಳಿತ ಅವದಿಯಲ್ಲಿ ನೀರಾವರಿ ಯೋಜನೆಗಳಿಗೆ ಎಷ್ಟು ಅನುದಾನ ನೀಡಿದ್ದಾರೆ ಎಂದು ಪ್ರಶ್ನಿಸಿದ ಅವರು. 18 ಸಾವಿರ ಕೋಟಿಗಳನ್ನು ಮಾತ್ರ ನೀಡಿರುವರು, ನಾವು ಕೊಪ್ಪಳ ಏತ ನೀರಾವರಿ ಯೋಜನೆಗೆ ಒತ್ತಡ ನೀಡಲಾಗಿದ್ದು, ಕೃಷ್ಣಾ ಮೇಲ್ದಂಡೆ ಯೋಜನೆಗಳನ್ನು ಪೂರ್ಣಗೊಳಿಸಲಾಗುವುದು ಇದಕ್ಕೆ ಬೇಕಾದ ಮಂಜೂರಾತಿ ನೀಡಿದೆ. ಆದರೆ ಮಾರ್ಚ ಅಂತ್ಯಕ್ಕೆ 2,396 ಕೋಟಿ ವೆಚ್ಚದ ನೀರಾವರಿ ಕಾಮಗಾರಿ ಪೂರ್ಣಗೊಳಿಸಿ ನೀರಾವರಿಗೆ ಆಧ್ಯತೆ ನೀಡಲಾಗುವುದು ಎಂದು ಹೇಳಿದರು.
ಶಾಸಕ ಶಿವರಾಜ ತಂಗಡಗಿ ನೀರಾವರಿ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದಾರೆ. ಅವರ ಮೇಲೆ ಯಾವುದೆ ದೋಷ, ತಪ್ಪುಗಳು ಇಲ್ಲ ಬೇರೆಯವರಿಗೆ ಅವಕಾಶಕ್ಕಾಗಿ ಸಚಿವ ಸ್ಥಾನ ಬದಲಾವಣೆ ಮಾಡಲಾಗಿದೆ, ಅವರು ಸಚಿವರಾಗಿದ್ದಾಗ ಉತ್ತಮ ಕೆಲಸ ಮಾಡಿದ್ದಾರೆ ಏಳು ಕೆರೆಗಳನ್ನು 140 ಕೋಟಿಯಲ್ಲ ತುಂಬಿಸಿದ್ದು ರಾಜ್ಯದಲ್ಲಿಯೆ ಮೊದಲ ಬಾರಿ ಎಂದು ಹೆಳಿದರು.
ಜಿಲ್ಲಾ ಉಸ್ತುವಾರಿ ಮಂತ್ರಿ ಬಸವರಾಜ ರಾಯರೆಡ್ಡಿ ಮಾತನಾಡಿ ಸರ್ಕಾರದ ಸಾಧನೆಗಳು ಹಾಗೂ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಕುರಿತು ವಿವರಿಸಿದ ಅವರು ಕುಡಿಯುವ ನೀರು, ನೀರಾವರಿ ಸೇರಿದಂತೆ ಇತರೆ ಪ್ರಮುಖ ಯೋಜನೆಗಳನ್ನು ಕಾಲಮಿತಿಯೊಳಗೆ ಅನುಷ್ಠಾನಕ್ಕೆ ತರಲಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಶಾಸಕರಾದ ಇಕ್ಬಾಲ್ ಅನ್ಸಾರಿ, ರಾಘವೇಂದ್ರ ಹಿಟ್ನಾಳ, ಹಂಪನಗೌಡ ಬಾದರ್ಲಿ, ಕೆ. ಬಸವರಾಜ ಹಿಟ್ನಾಳ, ಜಿ.ಪಂ. ಅಧ್ಯಕ್ಷ ಕೆ. ರಾಜಶೇಖರ ಹಿಟ್ನಾಳ, ಉಪಾಧ್ಯಕ್ಷೆ ಲಕ್ಷ್ಮಮ್ಮ ನೀರಲೂಟಿ. ಈಲ್ಲಾಧಿಕಾರಿ ಎಂ. ಕನಗವಲ್ಲಿ, ಜಿ.ಪಂ. ಸಿಇಓ ವೇಂಕಟರಾಜ, ಅಪರ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಮತ್ತಿತರರು ಉಪಸ್ಥಿತರಿದ್ದರು.

loading...