ಪಟ್ಟಿ ನೀಡಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಡಿಸಿ

0
19
loading...

ಕನ್ನಡಮ್ಮ ಸುದ್ದಿ
ಬೆಳಗಾವಿ : ಜಿಲ್ಲೆಯ ಕುಡಚಿ, ರಾಯಬಾಗ, ಗೋಕಾಕ, ಕಿತ್ತೂರು, ರಾಮದುರ್ಗ ಹಾಗೂ ಯಮಕನರಮಡಿ ವಿಧಾನಸಭಾ ಕ್ಷೇತ್ರಗಳಲ್ಲಿ ಶಂಕು ಸ್ಥಾಪನೆಗೊಳ್ಳಲಿರುವ ಮತ್ತು ಉದ್ಘಾಟನೆಗೊಳ್ಳಲಿರುವ ಹೊಸ ಕಾಮಗಾರಿಗಳ ಯಾದಿಯನ್ನು ನೀಡದ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿ ಜಿಯಾವುಲ್ಲಾ.ಎಸ್. ತರಾಟೆಗೆ ತೆಗೆದುಕೊಂಡರು.
ಅವರು ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಿ.21 ಮತ್ತು 22 ರಂದು ಸಿಎಂ ಸಿದ್ದರಾಮಯ್ಯನವರು ಜಿಲ್ಲಾ ಪ್ರವಾಸ ಕೈಗೊಂಡಿರುವ ಅಂಗವಾಗಿ ಏರ್ಪಡಿಸಿದ್ದ ವಿವಿಧ ಇಲಾಖೆಯಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ ಎರಡು ದಿನಗಳಿಂದೆ ನಡೆದ ಸಭೆಯಲ್ಲಿ ಕಳೆದ ನಾಲ್ಕು ವರ್ಷದ ಅವಧಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಯಾದಿಯನ್ನು ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು, ಅಧಿಕಾರಿಗಳು ಸರಿಯಾಗಿ ಮಾಹಿತಿ ನೀಡಿಲ್ಲ ಎಂದರೆ ಏನು ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.
ಜಿಲ್ಲೆಯ ಕುಡಚಿ, ರಾಯಬಾಗ, ಗೋಕಾಕ, ಕಿತ್ತೂರು, ರಾಮದುರ್ಗ ಹಾಗೂ ಯಮಕನರಮಡಿ ವಿಧಾನಸಭಾ ಕ್ಷೇತ್ರಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಕಾಮಗಾರಿ ಪೂರ್ಣಗೊಂಡಿರುವ ಕಾಮಗಾರಿಗಳನ್ನು ಉದ್ಘಾಟನೆ ಮಾಡಲಿದ್ದಾರೆ. ಹಾಗಾಗಿ ಇಂತಹ ಕಾಮಗಾರಿಗಳ ಯಾದಿಯನ್ನು ತಕ್ಷಣ ಸಲ್ಲಿಸುವಂತೆ ಸೂಚಿಸಿದರು.
ಜಿಪಂ ಸಿಇಒ ರಾಮಚಂದ್ರನ್.ಆರ್. ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸುರೇಶ ಇಟ್ನಾಳ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

loading...