ಮುಂಬೈನಲ್ಲೂ ಒಖಿ ಚಂಡಮಾರುತದ ಅಬ್ಬರ, ಶಾಲೆಗಳಿಗೆ ರಜೆ, ಹೈ ಅಲರ್ಟ್ ಘೋಷಣೆ

0
19
loading...

ಮುಂಬೈ: ದಕ್ಷಿಣ ರಾಜ್ಯಗಳಾದ ತಮಿಳುನಾಡು ಮತ್ತು ಕೇರಳದಲ್ಲಿ ಸಾವು-ನೋವು ಮತ್ತು ಅಪಾರ ಹಾನಿಗೆ ಕಾರಣವಾಗಿದ್ದ ಒಖಿ ಚಂಡಮಾರುತ ಈಗ ದೇಶದ ವಾಣಿಜ್ಯ ರಾಜಧಾನಿ ಮುಂಬೈಗೂ ಕಾಲಿಟ್ಟಿದೆ. ಸೈಕ್ಲೋನ್ ಪರಿಣಾಮ ಮುಂಬೈ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಬಿರುಗಾಳಿಯಿಂದ ಕೂಡಿದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಮುಂಬೈ ಹವಾಮಾನ ವೀಕ್ಷಣಾಲಯ ನೀಡಿರುವ ಎಚ್ಚರಿಕೆಯನ್ನು ಮಹಾರಾಷ್ಟ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಎದುರಾಗಬಹುದಾದ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿರುವಂತೆ ರಕ್ಷಣಾ ಪಡೆಗಳಿಗೆ ಸೂಚನೆ ನೀಡಲಾಗಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ. ಮುಂಬೈ ಮತ್ತು ಸುತ್ತಮುತ್ತಲ ಪ್ರದೇಶಗಳಾದ ಸಿಂಧುದುರ್ಗ, ರತ್ನಗಿರಿ, ಥಾಣೆ, ರಾಯಗಢ್ ಮತ್ತು ಪಾಲ್ಗಡ್ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದೆ.

loading...