ರಸ್ತೆ ಅಪಘಾತ: ಓರ್ವ ಸಾವು

0
19
loading...

ಕನ್ನಡಮ್ಮ ಸುದ್ದಿ-ಬೆಳಗಾವಿ: ಚೋರ್ಲಾದಿಂದ ಬೆಳಗಾವಿಗೆ ಬರುತ್ತಿದ್ದ ವೇಳೆ ಬೈಕ್ ಸ್ಕಿಡ್‍ಆಗಿ ಬಿದ್ದ ಪರಿಣಾಮ ಗಂಭೀರಗಾಯಗೊಂಡು ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ ವ್ಯಕ್ತಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ.
ಖಾನಾಪೂರ ತಾಲೂಕಿನ ಚೋರ್ಲಾ ಗ್ರಾಮದ ಮಹೇಂದರ್ ರಾಮಾ ಗಾಂವಕರ್ (25) ಮೃತ ವ್ಯಕ್ತಿ. ಭಾನುವಾರ ಬೆಳಿಗ್ಗೆ ಗ್ರಾಮದಿಂದ ಬೆಳಗಾವಿಗೆ ಬರುವ ಸಮಯದಲ್ಲಿ ಗ್ರಾಮದ ಹೊರವಲಯದಲ್ಲಿ ಬೈಕ್ ಸ್ಕಿಡ್‍ಆಗಿ ಬಿದ್ದಿದ್ದಾನೆ. ತಕ್ಷಣ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ತಲೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ವ್ಯಕ್ತಿ ಸಾವನ್ನಪ್ಪಿದ್ದಾನೆ. ಈ ಕುರಿತು ಖಾನಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

loading...