ರಾಷ್ಟ್ರೀಯ ಕಲಾ ಪ್ರತಿಭೋತ್ಸವ

0
28
loading...

ಮುಂಡಗೋಡ: ಮುಂಡಗೋಡ ತಾಲೂಕು ಕಸಾಪ ಅಧ್ಯಕ್ಷ ನಾಗೇಶ ಪಾಲನಕರ, ರಾಷ್ಟ್ರೀಯ ವಿಕಾಸ ರತ್ನ ಆದರ್ಶ ದಂಪತಿ ಪ್ರಶಸ್ತಿಗೆ ಬಾಜನರಾಗಿದ್ದಾರೆ.
ಇತ್ತೀಚೆಗೆ ಬೆಂಗಳೂರ ನ ಕೊಂಡಜ್ಜಿ ಬಸಪ್ಪ ಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸುರ್ವೆ ಕಲ್ಚರ್‌ ಅಕಾಡೆಮಿ ಬೆಂಗಳೂರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಮಾಸ್ತಿ ವೆಂಕಟೇಶ ಅಯ್ಯಂಗಾರ ರಾಷ್ಟ್ರೀಯ ಕಲಾ ಪ್ರತಿಭೋತ್ಸವ, ಅಖಂಡ ಕರ್ನಾಟಕ ಚುಟುಕು ಸಾಹಿತ್ಯ ಮತ್ತು ಸಾಂಸ್ಕೃತಿಕ ದ್ವಿತೀಯ ಸಮ್ಮೇಳನದಲ್ಲಿ ಪ್ರಶಸ್ತಿ ಪಧಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಸಮ್ಮೇಳನಾಧ್ಯಕ್ಷ ಅಪ್ಪಾಸಾಹೇಬ ಅಲಿಬಾದಿ, ಮಾಜಿ ಸಚಿವ ಪಿ.ಜಿ.ಆರ್‌ ಸಿಂದ್ಯಾ, ರಾಮಚಂದ್ರ ಗೌಡರ, ದಾವಣಗೆರೆ ಚನ್ನಗಿರಿ ತಾಲೂಕಿನ ವಿರಕ್ತ ಮಠದ ಗುರುಬಸವ ಮಹಾಸ್ವಾಮಿಗಳು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ನಾಡಿನ ನೆಲ, ಜಲ, ಭಾಷೆ ಹಾಗೂ ಜನಜೀವನಗಳ ಬಗ್ಗೆ ಕಾಳಜಿ ಹೊಂದಿ ನಿಸ್ವಾರ್ಥದಿಂದ ನಾಡಿಗಾಗಿ ಸಲ್ಲಿಸಿದ ಅಪೂರ್ವ ಸೇವೆ ಮತ್ತು ಸಾದನೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

loading...