ರೈತರಿಂದ ಉಸ್ತುವಾರಿ ಸಚಿವರಿಗೆ ಘೇರಾವ

0
16
loading...

ಕನ್ನಡಮ್ಮ ಸುದ್ದಿ
ಬೆಳಗಾವಿ : ಕಬ್ಬಿನ ಬಾಕಿ ಬಿಲ್ ನೀಡುವಂತೆ ಒತ್ತಾಯಿಸಿ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಉಸ್ತುವರಿ ಸಚಿವ ರಮೇಶ ಜಾರಕಿಹೊಳಿ ಅವರ ವಾಹನವನ್ನು ಘೇರಾವ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಜರುಗಿತು.
ರೈತರು ಬೆಳೆದ ಕಬ್ಬಿನ ಬಾಕಿ ಹಣವನ್ನು ಕಾರ್ಖಾನೆಗಳಿಂದ ರೈತರಿಗೆ ನೀಡುವುದಕ್ಕೆ ಯಾವುದೇ ಕ್ರಮ ಕೈಗೊಳ್ಳದ ಸರಕಾರ, ಸಚಿವರ ಹಾಗೂ ಜಿಲ್ಲಾಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯನ್ನು ಮುಗಿಸಿಕೊಂಡು ಹೋಗುತ್ತಿದ್ದ ಸಚಿವ ರಮೇಶ ಜಾರಕಿಹೊಳಿ ಅವರ ವಾಹನದ ಮುಂದೆ ಕುಳಿತು 20 ಅಧಿಕ ರೈತರು ಕಳೆದ ಹಂಗಾಮಿನಲ್ಲಿ ಸಚಿವರ ಮಾಲೀಕತ್ವದ ಕಾರ್ಖಾನೆಗೆ ರೈತರು ಕಳುಹಿಸಿರುವ ಕಬ್ಬಿನ ಬಾಕಿ ಹಣವನ್ನು ನೀಡುವಂತೆ ಸಚಿವ ರಮೇಶ ಜಾರಕಿಹೊಳಿ ಅವರನ್ನು ಒತ್ತಾಯಿಸಿದರು.
ಸಚಿವ ರಮೇಶ ಜಾರಕಿಹೊಳಿ ಪ್ರತಿಕ್ರಿಯಿಸಿ, ತಾವು ರೈತರ ಪರವಾಗಿದ್ದೇವೆ. ರೈತರ ಸಮಸ್ಯೆಗಳಿಗೆ ಸ್ಪಂದನೆ ನೀಡುತ್ತಿದ್ದೇವೆ. ಎಪಿಎಂಸಿಗಳಲ್ಲಿ ವಿವಿಧ ಬೆಳೆಗಳ ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಡಿ.10ರ ನಂತರ ಕಬ್ಬಿನ ಬಾಕಿ ಹಣ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

loading...