ಸಂವಿಧಾನ ತಿದ್ದುಪಡಿ ಹೇಳಿಕೆ ವಿರುದ್ಧ ಪ್ರತಿಭಟನೆ

0
28
loading...

ಕನ್ನಡಮ್ಮ ಸುದ್ದಿ
ಬೆಳಗಾವಿ : ಸಂವಿಧಾನ ಬದಲಾವಣೆ ಮಾಡುವ ಕುರಿತು ಮಾತಗಳನ್ನಾಡಿರುವ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರ ಹೇಳಿಕೆ ಖಂಡಿಸಿ ಮಂಗಳವಾರ ಕರ್ನಾಟಕ ದಲಿತ ಯುವ ಸಂಘಟನೆಯ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಅಂಬೇಡ್ಕರ ಉದ್ಯಾನವನದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಚೆನ್ನಮ್ಮ ವೃತ್ತದಲ್ಲಿ ಸಚಿವ ಅನಂತಕುಮಾರ ಹೆಗಡೆ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿಗೆ ಮನವಿ ಸಲ್ಲಿಸಿದರು.
ಮಹೇಶ ಕೋಲಕಾರ, ಮಲ್ಲೇಶ ಕುರಂಗಿ, ಮೋಹನ ಕಾಂಬಳೆ, ಸುನೀಲ ಬಸ್ತವಾಡಕರ, ಮಾರುತಿ ಕಾಂಬಳೆ ಸೇರಿದಂತೆ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

loading...