‘ಹಳಿಯಾಳ ಹಬ್ಬ’ದ ಸಾಂಸ್ಕೃತಿಕ ಕಾರ್ಯಕ್ರಮ

0
24
loading...

ಹಳಿಯಾಳ: ಸಚಿವ ಆರ್‌.ವಿ. ದೇಶಪಾಂಡೆಯವರ ವಿ.ಆರ್‌. ದೇಶಪಾಂಡೆ ಮೆಮೋರಿಯಲ್‌ ಟ್ರಸ್ಟ್‌ ವತಿಯಿಂದ ‘ಹಳಿಯಾಳ ಹಬ್ಬ’ದ ಸಾಂಸ್ಕೃತಿಕ ಕಾರ್ಯಕ್ರಮವು ಡಿ.17 ರಂದು ಅರ್ಥಪೂರ್ಣವಾಗಿ ನೆರವೇರಿತು.
ಚಿನ್ನದ ಪದಕ ವಿಜೇತೆ ಕರ್ನಾಟಕದ ಮೊದಲ ಮಹಿಳಾ ದಿವ್ಯಾಂಗ ರೈಫಲ್‌ ಶೂಟರ್‌ ಜ್ಯೋತಿ ಸಣ್ಣಕ್ಕಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ ವಿ.ಆರ್‌.ಡಿ.ಎಂ. ಟ್ರಸ್ಟ್‌ನವರು ಆಯೋಜಿಸಿರುವ ಹಳಿಯಾಳ ಹಬ್ಬ ಕಾರ್ಯಕ್ರಮದ ಅಂಗವಾಗಿ ಊರಿನಲ್ಲಿ ಹಬ್ಬದ ವಾತಾವರಣ ಉಂಟಾಗಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿ.ಆರ್‌.ಡಿ.ಎಂ. ಟ್ರಸ್ಟ್‌ನ ಅಧ್ಯಕ್ಷರು ಹಾಗೂ ಸಚಿವ ಆರ್‌.ವಿ. ದೇಶಪಾಂಡೆ ಮಾತನಾಡಿದರು.
ಆರ್‌.ವಿ. ದೇಶಪಾಂಡೆ ಪತ್ನಿ ರಾಧಾ, ಪುತ್ರ ಪ್ರಶಾಂತ ದೇಶಪಾಂಡೆ, ಜಿಲ್ಲಾ ಪಂಚಾಯತ ಉಪಾಧ್ಯಕ್ಷ ಸಂತೋಷ ರೇಣಕೆ, ಸದಸ್ಯ ಕೃಷ್ಣಾ ಪಾಟೀಲ, ಜಿಲ್ಲಾ ವಕ್ಫ್‌ ಬೋರ್ಡ್‌ ಅಧ್ಯಕ್ಷ ಖಯಾಂ ಮುಗದ, ಬಗರಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಅಧ್ಯಕ್ಷ ಸುಭಾಸ ಕೋರ್ವೆಕರ, ಎಪಿಎಂಸಿ ಅಧ್ಯಕ್ಷ ಶ್ರೀನಿವಾಸ ಘೋಟ್ನೇಕರ, ಪುರಸಭಾ ಅಧ್ಯಕ್ಷ ಉಮೇಶ ಬೋಳಶೆಟ್ಟಿ, ಸದಸ್ಯರಾದ ಶಂಕರ ಬೆಳಗಾಂವಕರ, ಸತ್ಯಜೀತ ಗಿರಿ, ಫಯಾಜ್‌ ಶೇಖ, ವಿಧಾನ ಪರಿಷತ್‌ ಸದಸ್ಯ ಎಸ್‌.ಎಲ್‌. ಘೋಟ್ನೇಕರ ಪತ್ನಿ ಲಲಿತಾ ಮತ್ತು ಸೊಸೆ ಮೊದಲಾದವರು ವೇದಿಕೆಯಲ್ಲಿದ್ದರು.
ವಿಕಲಚೇತನರಿಗೆ ವಿವಿಧ ಸಾಧನ-ಸಲಕರಣೆಗಳನ್ನು ನೀಡಲಾಯಿತು. ಹಾಗೂ ಹಳಿಯಾಳ ಹಬ್ಬದ ಅಂಗವಾಗಿ ಏರ್ಪಡಿಸಲಾದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.

loading...