110 ಕೋಟಿ ರೂ ವೆಚ್ಚದ ವಿವಿಧ ಯೋಜನೆಗಳಿಗೆ ಸಿಎಂ: ಚಾಲನೆ

0
24
loading...

ಕನ್ನಡಮ್ಮ ಸುದ್ಧಿ- ಗೋಕಾಕ: ಕಾಂಗ್ರೇಸ್ ಸರಕಾರದ ಆಡಳಿತಾವಧಿಯಲ್ಲಿ ಶಿಶು ಮರಣ ಸಂಖ್ಯೆ ಕಡಿಮೆಯಾಗುತ್ತಿದೆ. ಮಗು ಆರೋಗ್ಯವಾಗಿರಬೇಕಾದರೆ. ತಾಯಿ ಆರೋಗ್ಯವಾಗಿರಬೇಕು ಅಲ್ಲದೇ ಪೌಷ್ಠಿಕಾಂಶ ಕೊರತೆ ನಿಗಿಸುವ ನಿಟ್ಟಿನಲ್ಲಿ ಶಾಲೆಗಳಲ್ಲಿ ಬಿಸಿಯೂಟ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.ಅವರು, ಗೋಕಾಕ ವಿಧಾನಸಭಾ ಕ್ಷೇತ್ರದ ಸುಮಾರು 110 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳ ಶಿಲಾನ್ಯಾಸ ನೆರವೆರಿಸಿ ಮಾತನಾಡಿದರು.
ಶಾಲೆಗಳಲ್ಲದೆ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಮತ್ತು ತಾಯಂದಿರಿಗೆ ಪೌಷ್ಠಿಕಾಂಶಯುಕ್ತ ಆಹಾರ ನೀಡಲಾಗುತ್ತಿದೆ. ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ನೆರವೆರಿಸಲಿದ್ದು, ಸಹಕಾರ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮತಕ್ಷೇತ್ರದ ವಿವಿಧ ಕಾಮಗಾರಿಗಳ ಕುರಿತು ಮಾತನಾಡಿದರು.

ಈ ಸಂಧರ್ಭದಲ್ಲಿ ಜಿಪಂ ಅದ್ಯಕ್ಷೆ ಆಶಾ ಐಹೋಳೆ, ತಾಪಂ ಅದ್ಯಕ್ಷೆ ಸುನಂದಾ ಕರದೇಸಾಯಿ, ನಗರಾಧ್ಯಕ್ಷ ತಳದಪ್ಪ ಅಮ್ಮಣಗಿ, ಜಿಲ್ಲಾಧಿಕಾರಿ ಎಸ್ ಜಿಯಾವುಲ್ಲಾ, ಪೋಲಿಸ್ ವರಿಷ್ಟಾಧಿಕಾರಿ ಡಾ. ಬಿ ಆರ್ ರವಿಕಾಂತೇಗೌಡ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್ ಸೇರಿದಂತೆ, ನಗರದ ಮತ್ತು ಮತಕ್ಷೇತ್ರ ವ್ಯಾಪ್ತಿಯ ವಿವಿಧ ಇಲಾಖೆಯ ಮೇಲಾಧಿಕಾರಿಗಳು ಸಿಬ್ಬಂಧಿ ವರ್ಗದವರು ಇತರರು ಇದ್ದರು.

loading...