ಅಭಿವೃದ್ಧಿ ಕಾಮಗಾರಿಯಲ್ಲಿ ಹೈಡ್ರಾಮಾ ಬಿಜೆಪಿ ಪ್ರತಿಭಟನೆ

0
26
ಕನ್ನಡಮ್ಮ ಸುದ್ದಿ
ಬೆಳಗಾವಿ : ಅಭಿವೃದ್ಧಿ ಕಾಮಗಾರಿಗಳಲ್ಲಿ ನಿರ್ಲಕ್ಷ್ಯ ವಹಿಸಿದ ಜಿಲ್ಲಾ ಉಸ್ತುವಾರಿ ಸಚಿವರು ತುರಾತುರಿಯಲ್ಲಿ ಕಾಮಗಾರಿಗಳಿಗೆ ಪೂಜೆ ಸಲ್ಲಿಸುತ್ತಿರುವುದನ್ನು ಖಂಡಿಸಿ ಶಾಸಕ ಸಂಜಯ ಪಾಟೀಲ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಗುರುವಾರ ಮಹಾನಗರ ಪಾಲಿಕೆ ಎದುರು ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಸರಕಾರಕ್ಕೆ, ಪಾಲಿಕೆಯ ಅಧುಕಾರಿಗಳ, ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಜನಪ್ರತಿನಿಧಿಗಳ ಹಕ್ಕು ಚ್ಯುತಿ ಮಾಡುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವರು ಯಾರದೋ ಮಾತು ಕೇಳಿ ಗ್ರಾಮೀಣ ಕ್ಷೇತ್ರದಲ್ಲಿರುವ ಪಾಲಿಕೆಯ ವ್ಯಾಪ್ತಿಯ ಪ್ರದೇಶಗಳಲ್ಲಿ ನೂರು ಕೋಟಿ ವಿಶೇಷ ಅನುದಾನದಲ್ಲಿ  ಕಾಮಗಾರಿಗೆ ಪೂಜೆ ಸಲ್ಲಿಸಿರುವುದು ಏಕೆ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.
ಭ್ರಷ್ಟ ಜಿಲ್ಲಾ ಉಸ್ತುವಾರಿ ಸಚಿವರ ಅಣತಿಯಂತೆ. ಕಾಂಗ್ರೆಸ್ ಪಕ್ಷದ ಏಜೆಂಟ್ ರಂತೆ ಕೆಲಸ ಮಾಡುತ್ತಿರುವ ಪಾಲಿಕೆಯ ಆಯುಕ್ತರು ಮೊದಲು ಇದನ್ನು ಕೈ ಬಿಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.
loading...