ಕನ್ನಡಿಗರನ್ನು ಕೆಣಕಿದ ಗೋವಾ ಮಂತ್ರಿ

0
15
loading...

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲ್ಲೂಕಿನಲ್ಲಿ ನಡೆಯುತ್ತಿರುವ ಕಳಸಾ ನಾಲಾ ಕಾಮಗಾರಿಯನ್ನು ಶನಿವಾರ ಪರಿಶೀಲನೆ ಮಾಡಿದ ಗೋವಾ ನೀರಾವರಿ ಸಚಿವ ವಿನೋದ ಪಾಳೇಕರ ‘ಕರ್ನಾಟಕದವರು ಹರಾಮಿಗಳು’ ಎಂದು ಹೇಳಿಕೆ ನೀಡಿದ್ದಾರೆ. ಕಣಕುಂಬಿ ಬಳಿ ಕಳಸಾ ನಾಲಾ ಕಾಮಗಾರಿ ಪರಿಶೀಲಿಸಿ, ರಾಜ್ಯ ಸರ್ಕಾರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘಿಸಿದೆ. ಮಹದಾಯಿ ವಿಚಾರದಲ್ಲಿ ಕರ್ನಾಟಕ ಸರ್ಕಾರ ಕೆಟ್ಟ ರಾಜಕಾರಣ ಮಾಡುತ್ತಿದೆ. ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರೀಕರ್ ಅವರು ರಾಜ್ಯ ಬಿ.ಜೆ.ಪಿ. ಅಧ್ಯಕ್ಷ ಯಡಿಯೂರಪ್ಪ ಅವರಿಗೆ ಬರೆದ ಪತ್ರ ನ್ಯಾಯಾಲಯದ ಆದೇಶ ಅಲ್ಲ ಎಂದಿದ್ದಾರೆ.

ಮಹದಾಯಿ ನಮ್ಮ ತಾಯಿ. ಕರ್ನಾಟಕದಲ್ಲಿ ರೈತರು ಪ್ರತಿಭಟನೆ ಮಾಡಿದರೆ ನಮಗೇನು? ಮಹದಾಯಿ ವಿವಾದ ಪ್ರಕರಣ ನ್ಯಾಯಾಧೀಕರಣದಲ್ಲಿ ಇತ್ಯರ್ಥವಾಗುವವರೆಗೆ ನೀರು ಕೊಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿ ಗೋವಾಗೆ ಮರಳಿದ ಮಂತ್ರಿ ಪಾಳೇಕರ್ ಅಲ್ಲಿ ಕನ್ನಡಿಗರನ್ನು ಟೀಕಿಸಿದ್ದಾರೆ.

ಕಳಸಾ ಕಾಮಗಾರಿ ವೀಕ್ಷಣೆಗೆ ಪೊಲೀಸ್ ಬಂದೋಬಸ್ತಿಯಲ್ಲಿ ಹೋಗಿದ್ದು ಏಕೆಎಂದು ಪ್ರಶ್ನೆ ಮಾಡಿದ ಗೋವಾ ಪತ್ರಕರ್ತರಿಗೆ ಪ್ರತಿಕ್ರಿಯಿಸಿದ ಸಚಿವರು,
ಕರ್ನಾಟಕದವರು ಹರಾಮಿಗಳು. ಆದ್ದರಿಂದ ಪೊಲೀಸ್ ಬಂದೋಬಸ್ತಿಯಲ್ಲಿ ಹೋಗಿದ್ದೆ ಎಂದಿದ್ದಾರೆ ಎಂದು ತಿಳಿದುಬಂದಿದೆ.

loading...