ಕೊರೆಗಾಂವ್ ಪ್ರಕರಣ ಖಂಡಿಸಿ ಚಿಕ್ಕೋಡಿ ಬಂದ್

0
35
loading...

ಚಿಕ್ಕೋಡಿ: ಮಹಾರಾಷ್ಟ್ರದ ಕೊರೆಗಾಂವ್ ನಲ್ಲಿ ದಲಿತರ ಮೇಲೆ ನಡೆದ ಹಿಂಸಾಚಾರ ಖಂಡಿಸಿ ಇಂದು ಚಿಕ್ಕೋಡಿ ಬಂದ್ ಗೆ ನಾನಾ ದಲಿತಪರ ಹಾಗೂ ಕನ್ನಡಪರ ಸಂಘಟನೆಗಳು ಕರೆ ನೀಡಿವೆ.
ಚಿಕ್ಕೋಡಿ ಬಂದ ಹಿನ್ನಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬೆಳಗ್ಗೆ ಯಿಂದಲೇ ವಾಯವ್ಯ ಕರ್ನಾಟಕ ಬಸ್ ಗಳು ಸೇರಿದಂತೆ ಖಾಸಗಿ ವಾಹನಗಳ ಸಂಚಾರ ಸಹ ಸ್ಥಗಿತಗೊಂಡಿದೆ. ಪಟ್ಟಣದಲ್ಲಿನ ಜನರು ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟಗಳನ್ನು ಬಂದ್ ಮಾಡಿ ಬೆಂಬಲ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆಯಲ್ಲಿ 2 ಸಾವಿರಕ್ಕಿಂತ ಹೆಚ್ಚು ಜನರು ಭಾಗವಹಿಸುವ ಸಾಧ್ಯತೆಯಿದೆ. ಘಟನೆ ಖಂಡಿಸಿ ಮಧ್ಯಾಹ್ನ 1ಕ್ಕೆ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಿದ್ದಾರೆ. ಕಳೆದ ವಾರ ಕೊರೆಗಾಂವ್ ವಿಜಯೋತ್ಸವದಲ್ಲಿ ಭಾಗವಹಿಸಿದ್ದ ದಲಿತರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಇದು ದಲಿತ ಸಮುದಾಯಕ್ಕೆ ಮಾಡಿದ ಅನ್ಯಾಯವಾಗಿದೆ ಎಂದು ಖಂಡಿಸಿ ಬಂದ್ ಗೆ ಕರೆ ನೀಡಲಾಗಿದೆ.
ಬೆಳಗ್ಗೆ 7ರಿಂದ ಸಂಜೆ 6 ರವರೆಗೆ ಪಟ್ಟಣ ಬಂದ್ ಮಾಡಲಾಗುವುದು ಎಂದು ದಲಿತ ಮುಖಂಡರಾದ ಅಶೋಕ ಭಂಡಾರಕರ್, ಬಸವರಾಜ ಢಾಕೆ, ಸುದರ್ಶನ ತಮ್ಮಣ್ಣವರ ತಿಳಿಸಿದ್ದಾರೆ. ಬಂದ್ ಹಿನ್ನಲೆಯಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

loading...