ಕೊಲೆ ಪ್ರಕರಣ ಸಿಐಡಿಗೆ ವಹಿಸಲು ಆಗ್ರಹ

0
23
loading...

ಕನ್ನಡಮ್ಮ ಸುದ್ದಿ
ಬೆಳಗಾವಿ : ತಾಲೂಕಿನ ಕೊಂಡಸಕೊಪ್ಪ ಗ್ರಾಮದ ಭೀಮಸೇನ ಕರಗುಪ್ಪಿಕರ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಬೇಕು ಎಂದು ಒತ್ತಾಯಿಸಿ ಗುರುವಾರ ಕರವೇ ಸಂತೋಷ ಅರಳಿಕಟ್ಟಿ ಬಣದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಕಳೆದ ತಿಂಗಳು ಕಮಕಾರಟ್ಟಿ ಹದ್ದಿನ ಹಳ್ಳದ ಬ್ರೀಡ್ಜ್ ಕೆಳಗೆ ಕೊಲೆ ಮಾಡಿ ಶವ ಎಸೆದು ಹೋಗಿದ್ದರು. ಕೊಲೆಯಾದ ಕುರಿತು ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಒಂದು ತಿಂಗಳು ಕಳೆದರು ಇಲ್ಲಿವರೆಗೆ ಆರೋಪಿಗಳನ್ನು ಬಂಧಿಸಿಲ್ಲ. ಆರೋಪಿಗಳಿಗೆ ಸ್ಥಳಿಯ ರಾಜಕಾರಣಿಗಳ ಬೆಂಬಲವಿರುವುದ್ದರಿಂದ ಇಲ್ಲಿವರೆಗೆ ಬಂಧನವಾಗಿಲ್ಲ. ಆರೋಪಿಗಳು ಗ್ರಾಮದಲ್ಲಿ ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಆರೋಪಿಗಳು ದೂರುದಾರರ ಮನೆಗೆ ಹೋಗಿ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಿ, ನಿಮಗೆ ಹಣ ನೀಡುತ್ತೇವೆ. ಇಲ್ಲದಿದ್ದರೆ ನಿಮ್ಮ ಕುಟುಂಬವನ್ನು ಜೀವಸಹಿತ ಉಳಿಸುವುದಿಲ್ಲ ಎಂದು ಜೀವ ಬೇದರಿಕೆ ಹಾಕುತ್ತಿದ್ದಾರೆ. ಕುಟುಂಬಕ್ಕೆ ಅಪಾಯವಿದೆ. ಈಗಾಗಲೇ ದೂರು ನೀಡಿದ್ದರೂ ಸಹ ಇಲ್ಲಿವರೆಗೆ ತನಿಖೆ ಮಾಡಿ ಆರೋಪಿಗಳನ್ನು ಬಂಧಿಸಿ ಕೋರ್ಟಿಗೆ ಹಾಜರು ಪಡಿಸಿಲ್ಲ. ಆರೋಪಿಗಳನ್ನು ಬಂಧಿಸಿ ಕೋರ್ಟಿಗೆ ಒಪ್ಪಿಸಿ ಸಾರ್ಜಶಿಟ್ ಹಾಕಿ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಿ ಕುಟುಂಬಕ್ಕೆ ನ್ಯಾಯ ದೊರಕಿಸಿ ಕೊಡಬೇಕು. ಇಲ್ಲ ಈ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಿ ಸೂಕ್ತ ತನಿಖೆ ನಡೆಸಿ ಆರೋಪಿಗಳಿಗೆ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರಶಾಂತ ಅರಳಿಕಟ್ಟಿ, ಭರಮಾ ಪರಸನ್ನವರ, ಪ್ರಶಾಂತ ಭಜಂತ್ರಿ, ಸುರೇಶ ಕರಗುಪ್ಪಿಕರ, ಸುನೀತಾ ಪರಸನ್ನವರ, ಅಕ್ಷತಾ ಸಾತನಾಯಿಕ ಸೇರಿದಂತೆ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

loading...