ಕೌಶಲ್ಯ ಕರ್ನಾಟಕ ಯೋಜನೆ:ಡಿಸಿ ಅಧ್ಯಕ್ಷತೆಯಲ್ಲಿ ಸಭೆ

0
32
loading...

ಕನ್ನಡಮ್ಮ ಸುದ್ದಿ

ಬೆಳಗಾವಿ : ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆಯಡಿ ಮೊದಲ ಹಂತವಾಗಿ ಬೆಳಗಾವಿ ಹಾಗೂ ಚಿಕ್ಕೋಡಿಯಲ್ಲಿ ತರಬೇತಿಗಳನ್ನು ಆದಷ್ಟು ಶೀಘ್ರವಾಗಿ ಪ್ರಾರಂಭಿಸುವಂತೆ ಜಿಲ್ಲಾಧಿಕಾರಿ ಜಿಯಾವುಲ್ಲಾ.ಎಸ್.ಅಧಿಕಾರಿಗಳಿಗೆ ಸೂಚಿಸಿದರು.

ಮಂಗಳವಾರ ಜಿಲ್ಲಾಧಿಕಾರಿ ಕಛೇರಿಯ ಸಭಾ ಭವನದಲ್ಲಿ ಜರುಗಿದ ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆ ಅನುಷ್ಠಾನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಚಿಕ್ಕೋಡಿ, ಬೆಳಗಾವಿ ಕೇಂದ್ರಗಳಲ್ಲಿರುವ ವಿವಿಧ ತರಬೇತಿ ವಿಷಯಗಳ ಅನುಗುಣವಾಗಿ ಕೌನ್ಸಿಲಿಂಗ್ ನಡೆಸಿ ತರಬೇತಿಗಳನ್ನು ಆರಂಭಿಸುವಂತೆ ತಿಳಿಸಿದರು.

ವಿವಿಧ ತಾಲೂಕಿನಲ್ಲಿನ ಸಂಸ್ಥೆಗಳು ನೀಡಿರುವ ತರಬೇತಿ ಟ್ರೇಡ್‍ಗಳ ಬಗ್ಗೆ ಪರಿಶೀಲನೆ ನಡೆಸಿ ಸರಕಾರಕ್ಕೆ ಅನುಮೂದನೆಗಾಗಿ ಪ್ರಸ್ತಾವಣೆ ಸಲ್ಲಿಸಬೇಕು. ಸರಕಾರದಿಂದ ಅನುಮತಿ ದೊರೆತ ನಂತರ ಕೌನ್ಸ್‍ಲಿಂಗ್ ನಡೆಸಿ ಅಭ್ಯರ್ಥಿಗಳನ್ನು ತರಬೇತಿಗೆ ಕಳುಹಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ ಸಿಇಒ ರಾಮಚಂದ್ರನ್.ಆರ್., ಮಹಾನಗರ ಪಾಲಿಕೆ ಆಯುಕ್ತ ಶಶಿಧರ ಕುರೇರ, ಪ್ರವೀಣ ಬಾಗೇವಾಡಿ, ಎಂ.ಸಿದ್ದಣ್ಣ ಸೇರಿದಂತೆ ಕೃಷಿ, ತೋಟಗಾರಿಕೆ, ಕೈಗಾರಿಕೆ, ಜಿಪಂ, ಸಮಾಜ ಕಲ್ಯಾಣ, ಹಿಂದುಗಳಿ ವರ್ಗಗಳ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

loading...