ನೂತನ ಪಿಂಚಣಿ ಯೋಜನೆ ರದ್ದತಿಗೆ ಒತ್ತಾಯಿಸಿ ಪ್ರತಿಭಟನೆ

0
30
loading...

ರಾಯಬಾಗ 18: ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸಬೇಕು ಹಾಗೂ ಕರ್ನಾಟಕ ರಾಜ್ಯ 6ನೇ ವೇತನ ಆಯೋಗಕ್ಕೆ ಶಿಫಾರಸು ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು ತಹಶೀಲ್ದಾರ ಕೆ.ಎನ್‌.ರಾಜಶೇಖರ ಮೂಲಕ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಗುರುವಾರ ಮನವಿ ಸಲ್ಲಿಸಿದರು. ಲಕೇಂದ್ರ ಸರ್ಕಾರವು 2004ರಲ್ಲಿ ಅವೈe್ಞಾನಿಕ ಸಿದ್ದಾಂತ ಹಾಗೂ ಅಭದ್ರತೆಯಿಂದ ಕೂಡಿದ ಎನ್‌.ಪಿ.ಎಸ್‌. ಯೋಜನೆಯನ್ನು ಜಾರಿಗೊಳಿಸಿದ್ದು, ಇದು 2006ರಲ್ಲಿ ರಾಜ್ಯದಲ್ಲಿ ಜಾರಿಗೆ ಬಂದ ಸರ್ಕಾರಿ ನೌಕರರಿಗೆ ಪಿಂಚಣಿ ಸೌಲಭ್ಯದಲ್ಲಿ ಹಲವು ನ್ಯೂನತೆಗಳು ಉಂಟಾಗಿರುವುದಲ್ಲದೆ, ಟ್ರಸ್ಟ್‌ ಮ್ಯಾನೇಜ್‌ಮೆಂಟನವರು ನಿರ್ವಹಿಸುವ ಇದರ ಆರ್ಥಿಕ ಕಾರ್ಯನಿರ್ವಹಣೆಯಲ್ಲಿ ಯಾವುದೇ ಬದ್ದತೆಗಳು ಇಲ್ಲದೇ, ಅನಿಶ್ಚಿತ ಪಿಂಚಣಿ ಯೋಜನೆಯಾಗಿದ್ದು, ಇದರಿಂದ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು 1.80 ಲಕ್ಷ ಸರ್ಕಾರಿ ನೌಕರರು ಸೇವಾ ನಿವೃತ್ತಿ ಸಂದರ್ಭದಲ್ಲಿ ಪಿಂಚಣಿ ಮತ್ತು ಇನ್ನಿತರ ಸವಲತ್ತುಗಳಿಂದ ವಂಚಿತರಾಗಿ ಸಾಮಾಜಿಕ ಅನ್ಯಾಯಕ್ಕೆ ತುತ್ತಾಗಲಿದ್ದಾರೆಂದು ತಮ್ಮ ಮನವಿಯಲ್ಲಿ ಆರೋಪಿಸಿದರು.ಲಎನ್‌.ಪಿ.ಎಸ್‌. ನೌಕರರ ಜ್ವಲಂತ ಸಮಸ್ಯೆಯನ್ನು ಮಾನವೀಯ ನೆಲೆಗಟ್ಟಿನಲ್ಲಿ ಅವಲೋಕಿಸಿ, ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ, ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಕೇಂದ್ರ/ರಾಜ್ಯ ಸರ್ಕಾರಕ್ಕೆ ಅಗತ್ಯ ಶಿಫಾರಸು ಮಾಡುವುದರ ಜೊತೆಗೆ, ಈ ಯೋಜನೆಯ ಸಾಧಕ ಬಾಧಕಗಳ ಬಗ್ಗೆ ಅಧ್ಯಯನ ನಡೆಸಿ ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆ ಪದ್ದತಿಯನ್ನು ಅಳವಡಿಸಿಕೊಳ್ಳಲು ಅಗತ್ಯ ಶಿಫಾರಸು ಮಾಡುವಂತೆ ಕರ್ನಾಟಕ ರಾಜ್ಯ 6ನೇ ವೇತನ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿ ಅನುಕೂಲ ಕಲ್ಪಿಸುವ ಮೂಲಕ ನೌಕರರಿಗೆ ಸಾಮಾಜಿಕ ನ್ಯಾಯ ಕಲ್ಪಿಸಿಕೊಂಡಬೇಕೆಂದು ಮನವಿಯಲ್ಲಿ ಒತ್ತಾಯಿಸಿದರು. ಲಡಿ.ಎಮ್‌.ಜಕ್ಕಪ್ಪಗೋಳ, ಆಯ್‌.ಆರ್‌.ನದಾಫ, ವ್ಹಿ.ಬಿ.ಅರಗೆ, ವಿನೋದ ಚವ್ಹಾಣ, ಹೆಚ್‌.ಎಲ್‌.ಪೂಜಾರಿ, ವ್ಹಿ.ಬಿ.ಹಾರೂಗೇರಿ, ಎ.ಬಿ.ಕದಮ, ಡಿ.ವ್ಹಿ.ನಾಯಕಪಾಟೀಲ, ಸುಲೇಮಾನ ಶೇಖ, ಬಿ.ಎಮ್‌.ಮೆಣಸಿ, ಎಮ್‌.ಸಿ.ಐವಳೆ, ದಿಲೀಪ ಹಾರೂಗೇರಿ, ಎನ್‌.ಕೆ.ಕಲ್ಲೋಳಿಕರ, ಎಸ್‌.ಬಿ.ಚಮನಶೇಖ ಸೇರಿದಂತೆ ಅನೇಕರು ಇದ್ದರು.

loading...