ನ್ಯಾಯಾಂಗ ವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸುಪ್ರೀಂ ನ್ಯಾಯಮೂರ್ತಿಗಳು

0
22
loading...

ನವದೆಹಲಿ – ದೇಶದ ಇತಿಹಾಸದಲ್ಲಿದೇ ಇದೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಸುದ್ದಿಗೋಷ್ಠಿಯನ್ನು ನಡೆಸಿದ್ದು, ನ್ಯಾಯಾಂಗ ವ್ಯವಸ್ಥೆ ಕುರಿತು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.
ನ್ಯಾಯಮೂರ್ತಿಗಳಾ ಚೆಲಮೇಶ್ವರ್, ರಂಜನ್ ಗೊಗೋಯಿ, ಮದನ್ ಲೋಕೂರ್ ಹಾಗು ಕುರಿಯನ್ ಜೋಸೆಫ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ.
ಸುದ್ದಿಗೋಷ್ಠಿ ನಡೆಸುವ ನಿರ್ಧಾರವನ್ನು ನ್ಯಾಯಮೂರ್ತಿ ಚೆಲಮೇಶ್ವರ್ ಅವರು ತೆಗೆದುಕೊಂಡಿದ್ದು, ತಮ್ಮ ನಿವಾಸದ ಆವರಣದಲ್ಲಿಯೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತತು ನ್ಯಾಯಾಂಗ ವ್ಯವಸ್ಥೆ ಕುರಿತು ಬಹಿರಂಗವಾಗಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.
ಭಾರತದ ಇತಿಹಾಸದಲ್ಲಿಯೇ ನ್ಯಾಯಾಮೂರ್ತಿಗಳು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದು ಇದೇ ಮೊದಲು ಎನ್ನಲಾಗಿದೆ.

loading...