ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ ಕಚೇರಿಗೆ ಮುತ್ತಿಗೆ

0
12
loading...

ಕನ್ನಡಮ್ಮ ಸುದ್ದಿ-ವಿಜಯಪುರ: ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನವರು ಉಗ್ರಗಾಮಿಗಳು ಎಂದು ಅಸಂಬದ್ಧವಾಗಿ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಕ್ರಮವನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ವಿಜಯಪುರ ಜಿಲ್ಲಾ ಕಾಂಗ್ರೆಸ್‌ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು.
ಈ ಸಂದರ್ಭದಲ್ಲಿ ಪೊಲೀಸರು ಬಿಜೆಪಿಯ 45 ಕ್ಕೂ ಹೆಚ್ಚು ಕಾರ್ಯಕರ್ತರನ್ನು ತಮ್ಮ ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದರು. ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಬಿಜೆಪಿ ಕಾರ್ಯಕರ್ತರು ಧಿಕ್ಕಾರದ ಘೋಷಣೆ ಮೊಳಗಿಸಿದರು.
ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ದೇಶಭಕ್ತಿಯನ್ನೇ ಉಸಿರಾಗಿಸಿಕೊಂಡಿರುವ ಆರ್‌ಎಸ್‌ಎಸ್‌ ಬಗ್ಗೆ, ಬಿಜೆಪಿಯ ಬಗ್ಗೆ ಅಸಂಬದ್ಧರೀತಿಯಲ್ಲಿ ಮಾತನಾಡಿರುವ ಕ್ರಮ ಖಂಡನೀಯ ಎಂದರು.
19 ರಾಜ್ಯದಲ್ಲಿ ಹಾಗೂ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯ ಬಗ್ಗೆಯೂ ಹಗುರವಾಗಿ ಮಾತನಾಡಿರುವ ಮುಖ್ಯಮಂತ್ರಿಗಳ ಕ್ರಮ ಖಂಡನೀಯ. ಈ ರೀತಿಯ ಬೇಜವಾಬ್ದಾರಿತನದಿಂದ ಹೇಳಿಕೆ ನೀಡುವುದನ್ನು ಮುಖ್ಯಮಂತ್ರಿಗಳು ನೀಡಬೇಕು, ಕೂಡಲೇ ಅವರು ತಮ್ಮ ಹೇಳಿಕೆಯ ಬಗ್ಗೆ ವಿಷಾದ ವ್ಯಕ್ತಪಡಿಸಿ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಅರುಣ ಶಹಾಪೂರ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ವಿಠ್ಠಲ ಕಟಕದೊಂಡ, ಮಾಜಿ ಸಚಿವ ಎಸ್‌.ಕೆ. ಬೆಳ್ಳುಬ್ಬಿ, ಸೋಮನಗೌಡ ಪಾಟೀಲ ಸಾಸನೂರ, ವಿಜಯಕುಮಾರ ಪಾಟೀಲ, ಡಾ.ಸುರೇಶ ಬಿರಾದಾರ, ಗೋಪಾಲ ಘಟಕಾಂಬಳೆ, ಪರಶುರಾಮಸಿಂಗ್‌ ರಜಪೂತ, ರಾಹುಲ ಜಾಧವ, ಆನಂದ ಧುಮಾಳೆ, ವಿವೇಕ ಡಬ್ಬಿ, ರವಿಕಾಂತ ಪಾಟೀಲ, ರವಿ ಖಾನಾಪೂರ, ವಿಜಯ ಜೋಶಿ ಮೊದಲಾದವರು ಭಾಗವಹಿಸಿದ್ದರು.

loading...