ಮತದಾನ ಮಹತ್ವ ಜಾಗೃತಿಗೆ ಹಲವು ಕಾರ್ಯಕ್ರಮ: ವೆಂಕಟರಾಜಾ

0
97
loading...

ಕನ್ನಡಮ್ಮ ಸುದ್ದಿ-ಕೊಪ್ಪಳ : ಜಿಲ್ಲೆಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಯುವ ಜನತೆಗೆ ಮತದಾನದ ಮಹತ್ವ ಕುರಿತಂತೆ ಅರಿವು ಮೂಡಿಸಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸುವ ಸಂಬಂಧ ಜಿಲ್ಲಾ ಪಂಚಾಯತಿಯ ಸ್ಥಾಯಿ ಸಮಿತಿ ಕೊಠಡಿಯಲ್ಲಿ ಏರ್ಪಡಿಸಲಾಗಿದ್ದ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು ಜ. 25 ರಂದು ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸಲಾಗುತ್ತಿದೆ.
ಯುವ ಜನತೆಗೆ ನೈತಿಕ ಮತ ಚಲಾಯಿಸುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಅಗತ್ಯ ಇದೆ ಎಂದು ಹೇಳಿದ ಅವರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸುವುದು ಹಾಗೂ ನೈತಿಕ ಮತದಾನದ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವದೆಂದರು. ಸಭೆಯಲ್ಲಿ ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಎನ್‌.ಕೆ. ತೊರವಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಜಾಸಾಬ್‌, ಡಿಡಿಪಿಐ ಹನುಮಂತಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

loading...