ಮನೆ ಮನೆಗೆ ಕುಮಾರಣ್ಣ ಕಾರ್ಯಕ್ರಮ

0
26
loading...

ಗದಗ: ಜಿಲ್ಲಾ ಜಾತ್ಯಾತೀತ ಜನತಾದಳ ಮಹಿಳಾ ಘಟಕ ನಗರದ ಶಹಪೂರ ಪೇಟೆಯ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ‘ಮನೆ ಮನೆಗೆ ಕುಮಾರಣ್ಣ ಕಾರ್ಯಕ್ರಮ’ ಉದ್ಘಾಟನಾ ಸಮಾರಂಭವನ್ನು ಏರ್ಪಡಿಸಲಾಗಿತ್ತು.
ವಿಧಾನ ಪರಿಷತ್ ಸದಸ್ಯ ಜೆಡಿಎಸ್ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಬಸವರಾಜ ಹೊರಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಗದಗನಲ್ಲಿ ಜೆಡಿಎಸ್ ಪಕ್ಷವನ್ನು ಬೆಂಬಲಿಸಬೇಕೆಂದರು. ಗದಗ ಜಿಲ್ಲೆಯಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರವನ್ನು ಹೊಂದಿದ್ದು ಇದರಲ್ಲಿ 2 ರಿಂದ 3 ಕ್ಷೇತ್ರಗಳು ಪಕ್ಷ ಗೆಲ್ಲುವ ಸಾಧ್ಯತೆ ಇದೆ ಎಚ್. ಡಿ. ಕುಮಾರಸ್ವಾಮಿ ಅವರ ಕಾರ್ಯಕ್ರಮಗಳು ಜಾರಿಗೆ ತಂದ ಯೋಜನೆಗಳು ಪಕ್ಷದ ಅಭ್ಯರ್ಥಿಗಳ ಗೆಲ್ಲುವಿಗೆ ಕಾರಣವಾಗಬಹುದು ಎಂದರು.
ಮುಖ್ಯ ಅತಿಥಿ ಜಿಲ್ಲಾಧ್ಯಕ್ಷ ಈರಣ್ಣ ಬಾಳಿಕಾಯಿ ಮಾತನಾಡಿ ಜಿಲ್ಲಾ ಜಾತ್ಯಾತೀತ ಜನತಾದಳ ಮಹಿಳಾ ಘಟಕದಿಂದ ಕೈಗೊಂಡಿರುವ ‘ಮನೆ ಮನೆಗೆ ಕುಮಾರಣ್ಣ’ ಅಭಿಯಾನವನ್ನು ಗದಗ ಜಿಲ್ಲೆಯಲ್ಲಿ ಕೈಗೊಂಡಿರುವದಾಗಿ ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಜಾತ್ಯಾತೀತ ಜನತಾ ದಳದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಅಂಬಿಕಾ ಕಬಾಡಿ ಅವರು ಮಾತನಾಡಿ ಪಕ್ಷದ ಮಹಿಳಾ ಘಟಕದ ಪದಾಧಿಕಾರಿಗಳು ಕಾರ್ಯಕರ್ತರು ಮನೆ ಮನೆಗೆ ಕುಮಾರಣ್ಣ ಅಭಿಯಾನವನ್ನು ಜಿಲ್ಲೆಯ ಪ್ರತಿ ಮನೆ ಮನೆಗೆ ತಲುಪಿಸಿ ಜಿಲ್ಲೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವದಾಗಿ ಹೇಳಿದರು. ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಪಾಲ್ಗೋಂಡಿದ್ದರು.

loading...