ಮಾಜಿ ಸಚಿವ ಅಸ್ನೋಟಿಕರ್‌ 15 ರಂದು ಜೆಡಿಎಸ್‌ ಸೇರ್ಪಡೆ: ಸಾವಂತ

0
10
loading...

ಕನ್ನಡಮ್ಮ ಸುದ್ದಿ-ಕಾರವಾರ: ಇದೇ 15 ರಂದು ಬೆಂಗಳೂರಿನಲ್ಲಿ ಜೆಡಿಎಸ್‌ ವರಿಷ್ಠರಾದ ದೇವೆಗೌಡ ಹಾಗೂ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಅಧಿಕೃತವಾಗಿ ಮಾಜಿ ಸಚಿವ ಆನಂದ ಅಸ್ನೋಟಿಕರ್‌ ಜೆಡಿಎಸ್‌ ಸೇರ್ಪಡೆಗೊಳ್ಳಲಿದ್ದಾರೆ ಎಂದು ಜೆಡಿಎಸ್‌ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಪುರುಷೋತ್ತಮ ಸಾವಂತ ತಿಳಿಸಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆನಂದ್‌ ಅಸ್ನೋಟಿಕರ್‌ ಪಕ್ಷಕ್ಕೆ ಸೇರಿದರೆ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಬಲ ಇನ್ನಷ್ಟು ಹೆಚ್ಚಾಗಿದೆ. ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಆನಂದ್‌ ಅವರಿಗೆ ಪಕ್ಷದ ಎಲ್ಲ ಕಾರ್ಯಕರ್ತರ ಸಂಪೂರ್ಣ ಬೆಂಬಲವಿದ್ದು, ಅವರ ಗೆಲುವಿಗಾಗಿ ಎಲ್ಲರೂ ಶ್ರಮಿಸುತ್ತೇವೆ. ಅಲ್ಲದೆ ಕಳೆದ ನಾಲ್ಕುವರೆ ವರ್ಷಗಳಿಂದ ಕ್ಷೇತ್ರದಲ್ಲಿ ಅಭಿವೃದ್ಧಿ ಎಂಬುದು ಮರಿಚಿಕೆಯಾಗಿದೆ. ಕೇವಲ ಪೇಪರ್‌ನಲ್ಲಿ ಮಾತ್ರ ಅಭಿವೃದ್ಧಿಯಾಗಿದೆ ಎಂದ ದಾಖಲಿಗಳಿವೆ. ಇದರಿಂದ ಈ ಭಾರಿ ಜನರು ಜೆಡಿಎಸ್‌ಗೆ ಮತ ನೀಡಿ ಗೆಲ್ಲಿಸಲಿದ್ದಾರೆ ಎಂದು ಹೇಳಿದರು.
ಜೆಡಿಎಸ್‌ ಹಿರಿಯ ಮುಖಂಡ ಖಲಿಲುಲ್ಲಾ ಶೇಖ್‌ ಮಾತನಾಡಿ, ರಾಷ್ಟ್ರೀಯ ಪಕ್ಷಗಳು ಜಾತಿ, ಧರ್ಮದ ಆಧಾರದ ಮೇಲೆ ರಾಜಕಾರಣ ಮಾಡುತ್ತಿರುವುದರಿಂದ ಈ ಭಾರಿ ಮುಸ್ಲಿಂ ಸಮುದಾಯದವರು ಜೆಡಿಎಸ್‌ಗೆ ಸಂಪೂರ್ಣ ಬೆಂಬಲ ನೀಡಲಿದ್ದಾರೆ. ಅಲ್ಲದೆ ಕಾರವಾರ ಅಂಕೋಲಾ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯದವರು ಸ್ವ ಪ್ರೇರಣೆಯಿಂದ ಪ್ರತಿ ಮನೆ ಮನೆಗಳಿಗೆ ತೆರಳಿ ಪ್ರಚಾರ ನಡೆಸಲು ಮುಂದೆ ಬಂದಿದ್ದಾರೆ. ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಕುಮಾರ ಸ್ವಾಮಿಯನ್ನು ಮುಂದಿನ ಮುಖ್ಯಮಂತ್ರಿಯನ್ನಾಗಿಸುವ ನಿಟ್ಟಿನಲ್ಲಿ ಎಲ್ಲರು ಶ್ರಮಿಸಲಿದ್ದಾರೆ. ಈಗಾಗಲೇ ಹಲವು ಭಾರಿ ರಾಷ್ಟ್ರೀಯ ಪಕ್ಷಗಳಿಗೆ ಅವಕಾಶ ನೀಡಿದ ಜನರು ಇದು ಒಂದು ಭಾರಿಯಾದರು ಜೆಡಿಎಸ್‌ಗೆ ಮತ ಹಾಕಿ ಅಧಿಕಾರಕ್ಕೆ ತರಬೇಕು ಎಂದು ಮನವಿ ಮಾಡಿದರು. ತಾಲ್ಲೂಕು ಜೆಡಿಎಸ್‌ ಘಟಕದ ಅಧ್ಯಕ್ಷ ಅಜಿತ್‌ ಪೊಕಳೆ, ಪ್ರದೀಪ್‌ ಶೇಜವಾಡಕರ್‌, ಸಂತೋಷ ಹಾಜರಿದ್ದರು.

loading...