ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಪ್ರತಿಭಟನೆ

0
8
loading...

ಕನ್ನಡಮ್ಮ ಸುದ್ದಿ-ರಾಣೇಬೆನ್ನೂರ : ಬಿಜೆಪಿ ಸೇರಿದಂತೆ ಹಿಂದೂಪರ ಸಂಘಟನೆಗಳನ್ನು ಉಗ್ರಗಾಮಿಗಳು ಎಂದು ಕರೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯನ್ನು ಖಂಡಿಸಿ ನಗರದಲ್ಲಿ ಶುಕ್ರವಾರ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿಗಳ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.
ಮೊದಲಿಗೆ ನಗರದ ನ್ಯಾಯಾಲಯ ಮುಂಭಾಗದ ಹಳೆ ಪಿ.ಬಿ.ರಸ್ತೆಯಲ್ಲಿ ಪ್ರತಿಭಟನೆಗೆ ಮುಂದಾಗಿದ್ದರು. ಆದರೆ ಅದಕ್ಕೆ ಪೊಲೀಸರು ಅವಕಾಶ ನಿರಾಕರಿಸಿದ ಹಿನ್ನೆಲೆಯಲ್ಲಿ ಅಲ್ಲಿಂದ ನೇರವಾಗಿ ಸ್ಟೇಷನ್‌ ರಸ್ತೆಯ ಪಕ್ಷದ ಕಚೇರಿಗೆ ಹಿಂದಿರುಗಿ ಮುಖ್ಯಮಂತ್ರಿಗಳ ಪ್ರತಿಕೃತಿ ದಹಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಈ ಸಮಯದಲ್ಲಿ ಪಕ್ಷದ ಮುಖಂಡರು ಮಾತನಾಡಿ, ರಾಷ್ಟ್ರನಿರ್ಮಾಣ ಕಾರ್ಯದಲ್ಲಿ ಆರೆಸ್ಸೆಸ್‌ ಪಾತ್ರ ತುಂಬಾ ಪ್ರಮುಖವಾಗಿದೆ. ಆರೆಸ್ಸೆಸ್‌ ಕಾರ್ಯಕರ್ತರು ಎಂದಿಗೂ ದೇಶದಲ್ಲಿ ಗಲಭೆ ಸೃಷ್ಟಿಸುವ ಕೆಲಸ ಮಾಡಿಲ್ಲ. ದೇಶದ 19 ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಹಾಗೂ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿಯಂತಹ ಸಾಂವಿಧಾನಿಕ ಹುದ್ದೆಗಳನ್ನು ಅಲಂಕರಿಸಿರುವ ಬಿಜೆಪಿ ಬಗ್ಗೆ ಇಂತಹ ಕೀಳುಮಟ್ಟದ ಆರೋಪ ಮಾಡಿರುವುದು ಸರಿಯಲ್ಲ. ಇನ್ನು ಮೇಲಾದರೂ ಮುಖ್ಯಮಂತ್ರಿಗಳ ತಮ್ಮ ಸ್ಥಾನದÀ ಘನತೆಗೆ ತಕ್ಕಂತೆ ಮಾತನಾಡುವುದನ್ನು ಕಲಿಯಬೇಕು ಎಂದರು. ಪ್ರತಿಭಟನೆಯಲ್ಲಿ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.

loading...