ಕಾಂಗ್ರೆಸ್‌ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ : ಕೋತವಾಲ

0
27
loading...

ಕನ್ನಡಮ್ಮ ಸುದ್ದಿ-ಗೋಕಾಕ: ದಿ.24ರಂದು ಅಥಣಿ ನಗರದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿಯವರ ನೇತ್ರತ್ವದಲ್ಲಿ ನಡೆಯಲಿರುವ ಬೃಹತ್‌ ಕಾಂಗ್ರೆಸ್‌ ಸಮಾವೇಶಕ್ಕೆ ತಾಲೂಕಿನಿಂದ ಸಹಸ್ರಾರು ಕಾರ್ಯಕರ್ತರು ಭಾಗವಹಿಸಿ ಸಮಾವೇಶವನ್ನು ಯಶಸ್ವಿಗೊಳಿಸಬೇಕೆಂದು ಮಾಜಿ ನಗರಾಧ್ಯಕ್ಷ ಹಾಗೂ ಕಾಂಗ್ರೆಸ್‌ ಮುಖಂಡ ಎಸ್‌.ಎ ಕೋತವಾಲ ಹೇಳಿದರು.
ಅವರು, ಮಂಗಳವಾರದಂದು ನಗರದ ಕಾಂಗ್ರೆಸ್‌ ಕಾರ್ಯಾಲಯದಲ್ಲಿ ನಡೆದ ಕಾರ್ಯಕರ್ತರ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿ, ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಯವರು ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಬಲಿಷ್ಠಗೊಳಿಸಲು ಶ್ರಮಿಸುತ್ತಿದ್ದು ಕಾರ್ಯಕರ್ತರು ಸಂಘಟಿತರಾಗಿ ಶಾಸಕರ ಕೈ ಬಲಪಡಿಸಬೇಕು. ಅಥಣಿ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾವೇಶವನ್ನು ಯಶಸ್ವಿಗೊಳಿಸುವಂತೆ ಕರೆ ನೀಡಿದರು.
ಈ ಸಭೆಯಲ್ಲಿ ಕಾರ್ಮಿಕ ಮುಖಂಡ ಅಂಬಿರಾವ್‌ ಪಾಟೀಲ, ಕಾಂಗ್ರೆಸ್‌ ಪಕ್ಷದ ನಗರಘಟಕದ ಅಧ್ಯಕ್ಷ ನಜೀರ ಶೇಖ, ಡಿ.ಎಂ ದಳವಾಯಿ ಪ್ರಕಾಶ ಕರನಿಂಗ, ನಗರಸಭೆ ಅಧ್ಯಕ್ಷ ತಳದಪ್ಪ ಅಮ್ಮಣಗಿ, ನಗರಸಭೆ ಸದಸ್ಯರು, ಗ್ರಾಪಂ, ತಾಪಂ, ಜಿಪಂ. ಸದಸ್ಯರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

loading...