ಕೆರೆ ಸಂರಕ್ಷೀಸಿದರೆ ಗ್ರಾಮಗಳ ಅಭಿವೃದ್ಧಿ ಸಾಧ್ಯ: ಡಾ.ವೀರೇಂದ್ರ

0
19
loading...

ಕನ್ನಡಮ್ಮ ಸುದ್ದಿ-ಬೈಲಹೊಂಗಲ- ಇತ್ತಿಚೀನ ದಿನಮಾನಗಳಲ್ಲಿ ಮಳೆ ಅಭಾವ ಕಡಿಮೆಯಾಗುತ್ತಿರುವ ಕಾರಣ ರಾಷ್ಟ್ರ ಮಟ್ಟದಲ್ಲಿ ನೀರಿನ ಕೊರತೆಯಾಗುವ ಲಕ್ಷಣಗಳು ಕಂಡು ಬರುತ್ತಿದ್ದು, ಜನತೆ ನೀರನ್ನು ಮಿತವಯವಾಗಿ ಬಳಕೆ ಮಾಡಿಕೊಳ್ಳಬೇಕೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ: ವೀರೇಂದ್ರ ಹೆಗಡೆ ಹೇಳಿದರು.

ಅವರು ತಾಲೂಕಿನ ಆನಿಗೋಳ ಗ್ರಾಮದಲ್ಲಿ ಬುಧವಾರ ನಡೆದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಕೆರೆ ಅಭಿವೃದ್ಧಿ ಸಮಿತಿ ಆನಿಗೋಳ ಹಾಗೂ ಗ್ರಾಮ ಪಂಚಾಯತಿ ಆನಿಗೋಳ ಇವರ ಸಹಭಾಗಿತ್ವದಲ್ಲಿ ನಮ್ಮ ಊರು-ನಮ್ಮ ಕೆರೆ ಕಾರ್ಯಕ್ರಮದಡಿ ಆನಿಗೋಳ ಕೆರೆ ಹಸ್ತಾಂತರಿಸಿ ಮಾತನಾಡಿ, ಕೆರೆಗಳನ್ನು ನಮ್ಮದೇ ಎಂದು ತಿಳಿದು ಸಂರಕ್ಷಿಸಿದಾಗ ಮಾತ್ರ ಗ್ರಾಮಗಳು ಅಭಿವೃದ್ದಿ ಹೊಂದಲು ಸಾಧ್ಯ ಪಂಚಮಹಾಭೂತಗಳ ರಕ್ಷಣೆಯ ಅರಿವನ್ನು ಮಕ್ಕಳಲ್ಲಿ ಮೂಡಿಸಿ ಪರಿಸರ ಸಂರಕ್ಷಣೆಯ ಕಾರ್ಯಕ್ಕೆ ನಾವೇಲ್ಲಾ ಒಂದಾಗಬೇಕು. ಕೆರೆ ಹೂಳೆತ್ತಿ ನೀರು ಸಂಗ್ರಹಣಾ ಸಾಮರ್ಥ್ಯವನ್ನು ಮೂಲಕ ನೀರಿನ ಸಂರಕ್ಷಣೆ ಮಾಡುವ ಕಾರ್ಯವನ್ನು ಪ್ರತಿಯೊಬ್ಬರು ಮಾಡಬೇಕು. ಕೆರೆಗಳನ್ನು ಪುನಶ್ಚೇತನಗೊಳಿಸುವುದರ ಮೂಲಕ, ನಮ್ಮ ಮುಂದಿನ ಪೀಳಿಗೆಗೆ ಆಗಾಧವಾದ ಕೊಡುಗೆಗಳನ್ನು ನೀಡುವ ಅಗತ್ಯವಿದೆ ಎಂದರು.
ಶಾಸಕ ಡಾ.ವಿಶ್ವನಾಥ ಪಾಟೀಲ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಮ್ಮ ಪೂರ್ವಜರು ಮುಂದಾಲೋಚನೆ ಇಟ್ಟುಕೊಂಡು ಗ್ರಾಮೀಣ, ಪಟ್ಟಣ ಪ್ರದೇಶಗಳಲ್ಲಿ ಕೆರೆ ನಿರ್ಮಾಣ ಮಾಡಿದ್ದು ಅವುಗಳ ರಕ್ಷಣೆ ಮಾಡುವುರದ ಜೊತೆಗೆ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಡಾ.ವೀರೇಂದ್ರ ಹೆಗ್ಗಡೆಯವರು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮೂಲಕ ಸ್ರ್ತೀ ಶಕ್ತಿ ಸ್ವಸಹಾಯ ಸಂಘ ರಚಿಸಿ ಮಹಿಳೆಯರು ಸ್ವಾಲಂಬಿ ಜೀವನ ನಡೆಸಲು ಧಾರಿ ಮಾಡಿಕೊಟ್ಟಿದ್ದಾರೆ. ಕಳೆದ ಸಾಲನಲ್ಲಿ 37 ನೇ ರಾಜ್ಯಮಟ್ಟದ ಕೃಷಿಮೇಳ ಹಮ್ಮಿಕೊಳ್ಳುವ ಮೂಲಕ ರೈತರಿಗೆ ಶಕ್ತಿ ತುಂಬಿದ್ದಾರೆ ಎಂದರು.

ಮಾಜಿ ಶಾಸಕ ಜಗದೀಶ ಮೆಟಗುಡ್ಡ, ವಿಧಾನ ಪರಿಷತ್‌ ಮಾಜಿ ಸದಸ್ಯ ಮಹಾಂತೇಶ ಕೌಜಲಗಿ ಮಾತನಾಡಿದರು. ಶಾಖಾ ಮೂರು ಸಾವಿರಮಠದ ಪ್ರಭುನೀಲಕಂಠ ಸ್ವಾಮಿಗಳು ಆಶೀರ್ವಚನ ನೀಡಿದರು. ಶಂಕರಯ್ಯ ಸ್ವಾಮಿ ಹಿರೇಮಠ ಸಾನಿಧ್ಯ ವಹಿಸಿದ್ದರು. ಗ್ರಾಪಂ.ಅಧ್ಯಕ್ಷ ರಮೇಶ ಪರಂಡಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆ ಮೇಲೆ ಯೋಜನೆಯ ಪ್ರಾದೇಶಿಕ ಅಧಿಕಾರಿ ಎನ್‌.ಜಯಶಂಕರ ಶರ್ಮಾ, ಜಿ.ಪಂ.ಸದಸ್ಯ ಅನಿಲ ಮೇಕಲಮರ್ಡಿ, ತಾ.ಪಂ.ಅಧ್ಯಕ್ಷೆ ಶೈಲಾ ಸಿದ್ರಾಮನಿ, ಸದಸ್ಯೆ ನೀಲವ್ವಾ ಫಕೀರನ್ನವರ, ಕೆರೆ ಅಭಿವೃದ್ದಿ ಸಮಿತಿ ಅಧ್ಯಕ್ಷ ವಿ.ಕೆ.ಮರಕುಂಬಿ, ಬೊಮ್ಮನಾಯ್ಕ ಪಾಟೀಲ, ವಿಠ್ಠಲ ಪಿಸೇ ಇನ್ನಿತರರು ಇದ್ದರು.

loading...