ಮುಖ್ಯಮಂತ್ರಿ ಸಿದ್ದರಾಮಯ್ಯ ತವರಲ್ಲಿ ಪ್ರಧಾನಿ ಮೋದಿ

0
24
loading...

ಮೈಸೂರು -ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಕ್ಷೇತ್ರ ಮೈಸೂರಿನಲ್ಲಿ ಬಿಜೆಪಿ ತನ್ನ ಬಲ ಪ್ರದರ್ಶನಕ್ಕೆ ಪ್ರಧಾನಿ ಅವರ ಕಾರ್ಯಕ್ರಮವನ್ನು ವೇದಿಕೆಯನ್ನಾಗಿ ಮಾಡಿಕೊಂಡಿದ್ದು, ಲಕ್ಷಾಂತರ ಕಾರ್ಯಕರ್ತರನ್ನು ಸೇರಿಸುವ ಮೂಲಕ ತನ್ನ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ನರೇಂದ್ರ ಮೋದಿ ಅವರು ಮೈಸೂರಿನಲ್ಲಿ ಸಾಗುವ ಮಾರ್ಗದುದ್ದಕ್ಕೂ ಎತ್ತರೆತ್ತರದ ಕಟೌಟ್ ಗಳು, ಬಿಜೆಪಿ ಧ್ವಜಗಳು ರಾರಾಜಿಸುತ್ತಿವೆ. ಐದಾರು ಜಿಲ್ಲೆಗಳಿಂದ ಸುಮಾರು ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆಯಿದೆ. ಮೈಸೂರಿನ ರೈಲ್ವೆ ನಿಲ್ದಾಣದಲ್ಲಿ ಸರ್ಕಾರಿ ಕಾರ್ಯಕ್ರಮ, ಮಹಾರಾಜ ಕಾಲೇಜಿನಲ್ಲಿ ಬಹಿರಂಗ ಸಭೆ, ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ, ಎಲ್ಲಾ ಕಾರ್ಯಕ್ರಮಗಳಿಗೂ ಸರ್ವ ರೀತಿಯಲ್ಲಿ ಮೈಸೂರು ಸಜ್ಜುಗೊಂಡಿದೆ. ಬಹಿರಂಗ ಸಭೆಯಲ್ಲಿ ಪಾಲ್ಗೊಳ್ಳುವ ಜನರಿಗೆ ಉಚಿತವಾಗಿ ಊಟದ ವ್ಯವಸ್ಥೆ ಮಾಡಲು ರಾಜಸ್ಥಾನ ಸಮಾಜ ಮುಂದಾಗಿದೆ. ಇಂದು ಶ್ರವಣಬೆಳಗೊಳಕ್ಕೆ ತೆರಳಿ ಮಹಾಮಸ್ತಕಾಭಿಷೇಕದಲ್ಲಿ ಪಾಲ್ಗೊಂಡು, ಹೆಲಿಕಾಪ್ಟರ್ ನಿಂದ ಪುಷ್ಪಾರ್ಚನೆ ಮಾಡಿ ನಾನಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಬಹಿರಂಗ ಸಭೆಯಲ್ಲಿ ಅವರು ಮಾತನಾಡಲಿದ್ದಾರೆ.

loading...