ಅಲೆಮಾರಿ ಜನಾಂಗದ ಫಲಾನುಭವಿ ಆಯ್ಕೆ ಸರಿಯಾಗಿ ಮಾಡಿ: ಡಿಸಿ ಜಿಯಾವುಲ್ಲ್

0
21
loading...

ಕನ್ನಡಮ್ಮ ಸುದ್ದಿ-ಬೆಳಗಾವಿ: ಅಲೆಮಾರಿ, ಪರಿಶಿಷ್ಟ ಜಾತಿ ಮತ್ತು ವರ್ಗದ ಸಮುದಾಯದ ಜನಾಂಗದ ಅಭಿವೃದ್ಧಿಗೆ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ತಲುಪಿಸುವಲ್ಲಿ ಅಧಿಕಾರಿಗಳು ಪ್ರಮಾಣಿಕ ಪ್ರಯತ್ನ ಮಾಡಬೇಕು ಎಂದು ಜಿಲ್ಲಾಧಿಕಾರಿ ಜಿಯಾವುಲ್ಲಾ.ಎಸ್. ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿದ ವಿವಿಧ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿವಿಧ ಇಲಾಖೆಯಿಂದ ಹನಿ ನೀರಾವರಿ, ಫಾಲಿಹೌಸ್, ಕೋಳಿ ಫಾರಂ ಗೆ ಆಯ್ಕೆಯಾಗುವ ಫಲಾನುಭವಿಗಳ ಪಟ್ಟಿಯನ್ನು ತಾಲೂಕಾವಾರು ಆಯ್ಕೆಮಾಡಿ ಸಿದ್ಧಪಡಿಸಬೇಕು. ಆದರೆ ನೀವು ರಾಯಬಾಗ ತಾಲೂಕಿನ ಫಲಾನುಭವಿಗಳನ್ನು ಮಾತ್ರ ಆಯ್ಕೆ ಮಾಡಿದ್ದೀರಿ. ಜಿಲ್ಲೆಯ ಎಲ್ಲ ತಾಲೂಕಗಳಲ್ಲಿ ಇರುವ ಅಲೆಮಾರಿ ಜನಾಂಗದವರಿಂದ ಅರ್ಜಿ ಪಡೆದುಕೊಂಡು ಫಲಾನುಭವಿಗಳ ಆಯ್ಕೆ ಮಾಡಬೇಕೆಂದು ಸೂಚನೆ ನೀಡಿದರು.

loading...