ಕಣಬರ್ಗಿ ಭೂಸ್ವಾಧೀನ ವಿರೋಧಿಸಿ ರೈತರು ಪ್ರತಿಭಟನೆ

0
37
loading...

ಕನ್ನಡಮ್ಮ‌ಸುದ್ದಿ-ಬೆಳಗಾವಿ: ನಗರದ ಕಣಬರ್ಗಿ ಯಲ್ಲಿ ಬುಡಾ ವತಿಯಿಂದ 160 ಎಕರೆ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ಇಂದು ಕಣಬರಗಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಶ್ರೀರಾಮಸೇನೆ, ಭಜರಂಗದಳ, ಬಿಜೆಪಿ ಸಹ ಪ್ರತಿಭಟನೆಗೆ ಸಾಥ್ ನೀಡಿ ಬೆಂಬಲ ವ್ಯಕತಪಡಿಸಿದ್ದವು. ರೈತರು ತಮ್ಮ ಫಲವತ್ತಾದ ಭೂಮಿಯನ್ನು ನಗರ ಅಭಿವೃದ್ಧಿಗೆ ಕಾಂಕ್ರೀಟ್ ಕಾಡು ನಿರ್ಮಿಸಲು ಕೊಡಲಾರರು ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿದರು.
ಮಾಜಿ ಮಹಾಪೌರ ಶಿವಾಜಿ ಸುಂಠಕರ, ಬಿಜೆಪಿ ನಗರಾಧ್ಯಕ್ಷ ರಾಜೇಂದ್ರ ಹರಕುಣಿ, ಶ್ರೀರಾಮ ಸೇನಾ ಜಿಲ್ಲಾಧ್ಯಕ್ಷ ರಮಾಕಾಂತ ಕೊಂಡುಸ್ಕರ್ ಹಾಗೂ ಇತರರು ಉಪಸ್ಥಿತರಿದ್ದರು.

 

 

 

 

loading...