ಕಮಲವನ್ನು ಅರಳಿಸಲು ಕಾರ್ಯಕರ್ತರು ಶ್ರಮ ವಹಿಸಿ: ಡಾ.ವಿಶ್ವನಾಥ

0
23
loading...

ಕನ್ನಡಮ್ಮ ಸುದ್ದಿ-ಬೈಲಹೊಂಗಲ: ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಅತ್ಯಂತ ಅಧಿಕ ಮತಗಳಿಂದ ಗೆಲ್ಲಿಸಿ ಪಕ್ಷವನ್ನು ಅಧಿಕಾರಕ್ಕೆ ತರಲು ಕಾರ್ಯಕರ್ತರು ಹೆಚ್ಚಿನ ಶ್ರಮವಹಿಸಿ ದುಡಿಯಬೇಕೆಂದು ಜಿಲ್ಲಾಧ್ಯಕ್ಷ, ಶಾಸಕ ಡಾ.ವಿಶ್ವನಾಥ ಪಾಟೀಲ ಹೇಳಿದರು.
ಪಟ್ಟಣದ ಶಾಸಕರ ಕಛೇರಿಯಲ್ಲಿ ನಡೆದ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಪಕ್ಷದ ಸಿದ್ಧಾಂತದ ಪ್ರಕಾರ ನಡೆದುಕೊಂಡು ಪಕ್ಷ ಉನ್ನತಿಗೆ ಪ್ರಾಮಾಣಿಕ ಪ್ರಯತ್ನ ಅವಶ್ಯವಾಗಿದೆ. ಭೂತ ಮಟ್ಟದಲ್ಲಿ ಸಭೆ ನಡೆಸಿ ಪಕ್ಷದ ಸಿದ್ದಾಂತ ಒಪ್ಪಿ ಬಂದವರನ್ನು ಪಕ್ಷಕ್ಕೆ ಬರಮಾಡಿಕೊಂಡು ಪಕ್ಷ ಬಲಾಡ್ಯವಾಗುವಂತೆ ನೋಡಿಕೊಳ್ಳಬೇಕೆಂದರು. ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ದತ್ತಗುರು ಹೆಗಡೆ ಸಸಿಗೆ ನೀರುಣಿಸುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಧಾನ ಕಾರ್ಯದರ್ಶಿ ಗುರುಪಾದ ಕಳ್ಳಿ, ಧನಂಜಯ ಜಾಧವ, ಬೈಲಹೊಂಗಲ ಮಂಡಲ ಅಧ್ಯಕ್ಷ ಮಡಿವಾಳಪ್ಪಾ ಹೋಟಿ, ವಿರೇಶ ಹೊಳೆಪ್ಪನವರ, ಯಲ್ಲೇಶ ಕೋಲಕಾರ, ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕರು, ಸಹ ಸಂಚಾಲಕರು, ಮಂಡಲಗಳ ಅಧ್ಯಕ್ಷರು ಉಪಸ್ಥಿತರಿದ್ದರು.

loading...