ಕಾವೇರಿ ತೀರ್ಪು : ಸುಪ್ರೀಂಗೆ ಮೇಲ್ಮನವಿ

0
15
loading...

ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸದಿರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ನಾಳೆ ನವದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರು, ಸಂಸದರು ಹಾಗೂ ರಾಜ್ಯಸಭಾ ಸದಸ್ಯರ ಸಭೆ ಕರೆದಿದ್ದಾರೆ.

ಸಭೆಯಲ್ಲಿ ಮುಖ್ಯವಾಗಿ ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ ಬಳಿಕ ರಾಜ್ಯ ಸರ್ಕಾರವು ತನ್ನ ನಿಲುವನ್ನು ಸುಪ್ರೀಂಕೋರ್ಟ್‍ನಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಹಿರಿಯ ವಕೀಲ ನಾರಿಮನ್ ಮತ್ತು ಅವರ ತಂಡಕ್ಕೆ ತಿಳಿಸಲಿದೆ. ನದಿನೀರು ಹಂಚಿಕೆ ಸಂಬಂಧ ಸುಪ್ರೀಂಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಬೇಕೆಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಕೆಲ ದಿನಗಳ ಹಿಂದೆ ರಾಜ್ಯ ಸರ್ಕಾರಕ್ಕೆ ಸಲಹೆ ಮಾಡಿದ್ದರು. ಆದರೆ ಸರ್ಕಾರ ಮೇಲ್ಮನವಿ ಸಲ್ಲಿಸದಿರಲು ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಪುನಃ ಮೇಲ್ಮನವಿ ಸಲ್ಲಿಸಿದರೆ ವ್ಯತಿರಿಕ್ತ ತೀರ್ಪು ಬರಬಹುದೆಂಬ ಹಿನ್ನೆಲೆಯಲ್ಲಿ ಸರ್ಕಾರ ಎಚ್ಚರಿಕೆಯ ಹೆಜ್ಜೆ ಇಟ್ಟಿದೆ. ಈಗಾಗಲೇ ಸುಪ್ರೀಂಕೋಟ್ ್ ನೀಡಿರುವ ತೀರ್ಪಿನಿಂದ ಕರ್ನಾಟಕಕ್ಕೆ ಯಾವುದೇ ರೀತಿಯ ಹಿನ್ನಡೆಯಾಗಿಲ್ಲ ಎಂಬುದು ಮನವರಿಕೆಯಾಗಿರುವುದರಿಂದ ಅನಗತ್ಯವಾಗಿ ವಿವಾದವನ್ನು ಮೈಮೇಲೆ ಎಳೆದುಕೊಳ್ಳಬಾರದೆಂದು ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಲು ಹಿಂದೇಟು ಹಾಕಿದೆ.

ಕಾನೂನು ತಜ್ಞರು ಹಾಗೂ ಸುಪ್ರೀಂಕೋಟ್ ್ನ ಕೆಲವು ವಕೀಲರು ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ತೀರ್ಪು ಪ್ರಶ್ನಿಸಿ ಮೇಲ್ಮನವಿ ಹಾಕಿದರೆ ನ್ಯಾಯಾಲಯ ಈ ಹಿಂದೆ ನೀಡಿದ ತೀರ್ಪಿಗೆ ವ್ಯತಿರಿಕ್ತವಾಗಿ ತೀರ್ಪು ನೀಡಿದರೆ ರಾಜ್ಯಕ್ಕೆ ಹಿನ್ನಡೆಯಾಗುತ್ತದೆ ಎಂಬ ಆತಂಕವನ್ನು ವ್ಯಕ್ತಪಡಿಸಿದ್ದಾರೆ.

loading...