ಕೆಪಿಎಸ್ಸಿ ಅಕ್ರಮ ಖಂಡಿಸಿ ಅಭ್ಯರ್ಥಿಗಳಿಂದ ಪ್ರತಿಭಟನೆ

0
39
loading...

ಕನ್ನಡಮ್ಮ ಸುದ್ದಿ-ಬೆಳಗಾವಿ: ಇತ್ತೀಚೆಗೆ ಕೆಪಿಎಸ್ಸಿ ನಡಿಸಿದ ಎಸ್ ಡಿಎ, ಎಫ್.ಡಿ.ಎ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದನ್ನು ಖಂಡಿಸಿ, ಮರುಪರೀಕ್ಷೆಗೆ ಆಗ್ರಹಿಸಿ ಬಿಜೆಪಿ ಮುಖಂಡ ಅನೀಲ ಬೆನಕೆ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಕೆಪಿಎಸ್ಸಿ ನಡೆಸಿರುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಭಾರಿ ಅಕ್ರಮ ನಡೆದಿದ್ದು. ಎಲೆಕ್ಟ್ರಾನಿಕ್ ಸಾಧನಗಳಾದ ಮೈಕ್ರೋ ಇಯರ್’ಫೋನ್, ವಾಟ್ಸ್’ ಆಫ್ ಮೂಲಕ ನಕಲು ಮಾಡುವ ತಂಡ ಅಭ್ಯರ್ಥಿಗಳಿಂದ ಲಕ್ಷಾಂತರ ರೂ. ಹಣ ಪಡೆದು ಅಕ್ರಮ ನಡೆಸಿದೆ. ರಾಜ್ಯದ ಪ್ರಾಮಾಣಿಕ  ಶ್ರಮಪಟ್ಟು ಅಧ್ಯಯನ ಮಾಡಿದ ಸ್ಪರ್ಧಾರ್ಥಿಗಳಿಗೆ ಅನ್ಯಾಯವಾಗಿದೆ. ಅಕ್ರಮದ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಂಡು, ಮರುಪರೀಕ್ಷೆ ನಡೆಸಬೇಕೆಂದು ಆಗ್ರಹಿಸಿದರು.

loading...