ಚುನಾವಣೆ ಪ್ರಣಾಳಿಕೆಯಲ್ಲಿ ಮಕ್ಕಳಿಗೆ ಪ್ರಾಮುಖ್ಯತೆ ನೀಡಿ: ಶೋಭಾ ಗಸ್ತಿ

0
26
loading...

ಕನ್ನಡಮ್ಮ ಸುದ್ದಿ-ಬೆಳಗಾವಿ: ಕರ್ನಾಟಕ 15ನೇ ವಿಧಾನ ಸಭಾ ಚುನಾವಣೆ ಪ್ರಣಾಳಿಕೆಯಲ್ಲಿ ರಾಜಕೀಯ ಪಕ್ಷಗಳ ಸ್ವತ್ರಂತ್ರ ಅಭ್ಯರ್ಥಿಗಳು ಮಕ್ಕಳ ಘನತೆ ಹಾಗೂ ಹಕ್ಕುಗಳಿಗೆ ಪ್ರಾಮುಖ್ಯತೆ ನೀಡಬೇಕು ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಧರಣಿ ನಡೆಸಲಾಗುವುದು ಎಂದು ಸಾಮಾಜಿಕ ಪರಿವರ್ತನಾ ಜನಾಂದೋಲನದ ಜಿಲ್ಲಾ ಸಂಚಾಲಕ ಶೋಭಾ ಗಸ್ತಿ ಹೇಳಿದರು.
ಅವರು ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಆಯೋಜಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಾಮಾಜಿಕ ಪರಿವರ್ತನಾ ಜನಾಂದೋಲನವು ಮಕ್ಕಳ ಹಕ್ಕುಗಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಸಮಾನ ಮನಸ್ಕ ಸಂಘ ಸಂಸ್ಥೆಗಳ ರಾಜ್ಯ ಮಟ್ಟದ ಮೈತ್ರಿಯಾಗಿದೆ. ಮಕ್ಕಳ ಶಿಕ್ಷಣ, ಆರೋಗ್ಯ, ಪೌಶಿಷ್ಟಿಕತೆ, ಅಭಿವೃದ್ಧಿ ಹಾಗೂ ರಕ್ಷಣೆಗೆ ಸಂಬಂಧಿಸಿದಂತೆ ಕಳೆದ ಒಂದು ದಶಕದಿಂದ ಜನಾಂದೋಲನ ನಡೆಸಿಕೊಂಡು ಬರುತ್ತಿದೆ. ಮಕ್ಕಳಿಗಾಗಿ ಇರುವ ಸರ್ಕಾರದ ಯೋಜನೆಗಳ, ನೀತಿಗಳ ಸಮರ್ಪಕ ಜಾರಿಗಾಗಿ ಮಕ್ಕಳ ರಕ್ಷಣೆಗಾಗಿ ಇರುವ ಸಂವಿಧಾನಾತ್ಮಕ ಸಂಸ್ಥೆಗಳ ಸಬಲೀಕರಣಕ್ಕಾಗಿ ಶ್ರಮಿಸಲಾಗುತ್ತಿದೆ.
ರಾಜ್ಯದ 6.11ಕೋಟಿ ಜನಸಂಖ್ಯೆಯಲ್ಲಿ ಶೇ.43% ರಷ್ಟು 18 ವರ್ಷದೊಳಗಿನ ಮಕ್ಕಳಿಗೆ ಸಂಬಂಧಿಸಿದಂತೆ ಸರ್ಕಾರದ ಯೋಜನೆ ಹಾಗೂ ಕಾರ್ಯನೀತಿಗಳಲ್ಲಿ ಸೂಕ್ತ ಪ್ರಾಮುಖ್ಯತೆ ದೊರೆಯುತ್ತಿಲ್ಲ. ಆದ್ದರಿಂದ ಮುಂಬರುವ ರಾಜ್ಯ ವಿಧಾನಸಭಾ ಚುಣಾವಣೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳು ಹಾಗೂ ಸ್ವತಂತ್ರ ಅಭ್ಯರ್ಥಿಗಳು ತಮ್ಮ ಚುಣಾವಣೆ ಪ್ರಾಣಾಳಿಕೆಯಲ್ಲಿ ಮಕ್ಕಳ ಹಕ್ಕು ಬಾಧ್ಯತೆಗಳಿಗೆ ಪ್ರಥಮ ಆದ್ಯತೆ ನೀಡಬೇಕೆಂದು ಒತ್ತಾಯಿಸಿದರು.
ಅಲ್ಲದೆ ಒಂದುವೇಳೆ ಚುನಾವಣೆ ಪ್ರಾಣಾಳಿಕೆಯಲ್ಲಿ ಮಕ್ಕಳ ಘನತೆ ಹಾಗೂ ಹಕ್ಕುಗಳ ಪ್ರಾಮುಖ್ಯತೆ ನೀಡದಿದ್ದರೆ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಕಲಬುರಗಿ ಸಂಚಾಲಕ ವಿಠಲ್ ಚಿಕಣಿ, ಕಲ್ಲಪ್ಪ ಮಾಂಗ, ಲೂರ್ಧ, ಸುರಕ್ಷಾ, ಕೃಷ್ಣಭಾಯಿ ತಳವಾರ, ಲತಾ ಲೋಭೊ, ಸಿದ್ದಪ್ಪ ತಲ್ಲೂರ,ಮಂಜುಳಾ ಹರಿಜನ, ಭಾರತಿ ತರಕಾರಿ, ಜಾನಕಿ ಗಸ್ತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

loading...