ಜನಾರ್ಧನ ರೆಡ್ಡಿ ರೀಎಂಟ್ರಿ ಆಸೆಗೆ ತಣ್ಣೀರು ಎರಚಿದ  ಷಾ

0
44
loading...

ಮೈಸೂರು:ಅಕ್ರಮ ಗಣಿಗಾರಿಕೆ ಆರೋಪದ ಮೇಲೆ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮಾಜಿ ಸಚಿವ ಜನಾರ್ಧನ ರೆಡ್ಡಿಗೂ ನಮಗೂ ಯಾವುದೇ ರೀತಿಯ ಸಂಬಂಧವಿಲ್ಲ. ಪಕ್ಷ ಸೇರ್ಪಡೆ ಕುರಿತಂತೆ ನಾನು ಏನನ್ನು ಹೇಳುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಹೇಳಿದ್ದಾರೆ. ಖುದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರೇ ಈ ಹೇಳಿಕೆ ನೀಡಿರುವುದರಿಂದ ಪುನಃ ಮಾತೃ ಪಕ್ಷಕ್ಕೆ ಸೇರ್ಪಡೆಯಾಗಲು ಹವಣಿಸುತ್ತಿದ್ದ ಜನಾರ್ಧನ ರೆಡ್ಡಿ ಆಸೆಗೆ ತಣ್ಣೀರು ಎರಚಿದಂತಾಗಿದೆ.  ಪಕ್ಷ ಸಂಘಟನೆ ಹಾಗೂ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಆಗಮಿಸಿದ ಅಮಿತ್ ಷಾ ಇಂದು ಖಾಸಗಿ ಹೋಟೆಲ್‍ನಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.

ಈ ವೇಳೆ ಮಾಧ್ಯಮದವರು ಜನಾರ್ಧನ ರೆಡ್ಡಿ ಪಕ್ಷಕ್ಕೆ ಬರುವ ಇಂಗಿತ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ಅವರು ಬರುವುದಾದರೆ ನಿಮ್ಮ ಪಕ್ಷ ಸೇರ್ಪಡೆ ಮಾಡಿಕೊಳ್ಳುತ್ತದೆಯೇ ಎಂದು ಪ್ರಶ್ನಿಸಿದರು.   ಇದಕ್ಕೆ ಪ್ರತಿಕ್ರಿಯಿಸಿದ ಅಮಿತ್ ಷಾ, ಜನಾರ್ಧನ ರೆಡ್ಡಿಗೂ, ಪಕ್ಷಕ್ಕೂ ಸಂಬಂಧವೇ ಇಲ್ಲ. ಪಕ್ಷ ಸೇರ್ಪಡೆ ಬಗ್ಗೆ ನಾನು ಗೊಂದಲದ ಹೇಳಿಕೆ ನೀಡಿ ಇರಿಸು ಮುರಿಸು ಉಂಟು ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

loading...