ತಿರಸ್ಕತಗೊಂಡ ಅರ್ಜಿಗಳ ಪುನರ್ ಪರಿಶೀಲನೆಗೆ ಅವಕಾಶ ಕೊಡಿ ನಾಯ್ಕ

0
24
loading...

ಕನ್ನಡಮ್ಮ ಸುದ್ದಿ-ಶಿರಸಿ: ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ತಿರಸ್ಕøತಗೊಂಡ ಅರ್ಜಿಗೆ ಮೇಲ್ಮನವಿ ಸಲ್ಲಿಸದ ಅರ್ಜಿದಾರರ ಜಾದದಿಂದ ಒಕ್ಕಲೆಬ್ಬಿಸುವ ಕಾರ್ಯ ನಡೆಯಲಿದ್ದು, ರಾಜ್ಯ ಸರ್ಕಾರ ತಕ್ಷಣ ಮಧ್ಯ ಪ್ರವೇಶಿಸಿ ತಿರಸ್ಕøತಗೊಂಡ ಅರ್ಜಿಗಳ ಪುನರ್ ಪರಿಶೀಲನೆಗೆ ಅವಕಾಶ ಕೊಡಿಸಬೇಕು. ಜೊತೆಗೆ, ಭೂರಹಿತ ಅರಣ್ಯ ಅತಿಕ್ರಮಣದಾರಿಗೆ 3 ಎಕರೆಯಂತೆ ಅರಣ್ಯ ಭೂಮಿಯನ್ನು ಅರಣ್ಯೇತರ ಉದ್ದೇಶಕ್ಕೆ ಮಾರ್ಪಡಿಸಿ ಮಂಜೂರಿ ಮಾಡಬೇಕು ಎಂದು ಅರಣ್ಯ ಅತಿಕ್ರಮಣದಾರ ಹೋರಾಟಗಾರರ ವೇದಿಕೆ ಅಧ್ಯಕ್ಷ ಎ.ರವೀಂದ್ರ ನಾಯ್ಕ ಆಗ್ರಹಿಸಿದ್ದಾರೆ.
ಶಿರಸಿಯ ಜಿಲ್ಲಾ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿ, ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ತಿರಸ್ಕøತಗೊಂಡಿರುವ ಅರ್ಜಿದಾರರ ಒಕ್ಕಲೆಬ್ಬಿಸುವ ಪ್ರಕ್ರಿಯೆ ಕುರಿತು ನಾಲ್ಕು ವಾರಗಳಲ್ಲಿ ವರದಿ ಸಲ್ಲಿಸುವಂತೆ ಸರ್ವೋಚ್ಚ ನ್ಯಾಯಾಲಯ ಕರ್ನಾಟಕ ಸಹಿತ ಎಲ್ಲಾ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಅನರ್ಹ ಅರಣ್ಯ ಅತಿಕ್ರಮಣದಾರರು ಸರ್ವೋಚ್ಚ ನ್ಯಾಯಾಲಯದ ಈ ಆದೇಶದಂತೆ ಅತಿಕ್ರಮಣ ಪ್ರದೇಶ ಒಕ್ಕಲೆಬ್ಬಿಸುವ ಪ್ರಕ್ರಿಯೆ ಮುಂದಿನ 4 ವಾರಗಳಲ್ಲಿ ಪ್ರಾರಂಭವಾಗಲಿದೆ. ಸರ್ವೋಚ್ಛ ನ್ಯಾಯಾಲಯದ ಆದೇಶದಿಂದ ವಿವಿಧ ಹಂತದ ಅರಣ್ಯ ಹಕ್ಕು ಸಮಿತಿಗಳಲ್ಲಿ ತಿರಸ್ಕರಿಸಿಕೊಂಡಿರುವ ಅರ್ಜಿದಾರರು ಮೇಲ್ಮನವಿ ಸಲ್ಲಿಸದಿದ್ದಲ್ಲಿ ಒಕ್ಕಲೆಬ್ಬಿಸುವ ಪ್ರಕ್ರಿಯೆಗೆ ಒಳಪಡುತ್ತಾರೆ. ಮಾರ್ಚ 7ರಂದು ಸರ್ವೋಚ್ಛ ನ್ಯಾಯಾಲಯದ ಆದೇಶದಿಂದ ಅರಣ್ಯ ಅತಿಕ್ರಮಣದಾರರಿಗೆ ಭೂಮಿಯ ಹಕ್ಕಿನಿಂದ ವಂಚಿತರಾಗಿ ನಿರಾಶ್ರಿತರಾಗುವ ಸಂದರ್ಭಕ್ಕೆ ಒಳಗಾಗಿದೆ ಎಂದರು.

ಭೂರಹಿತ ಅರಣ್ಯ ಅತಿಕ್ರಮಣದಾರರಿಗೆ ಪ್ರತಿ ಕುಟುಂಬಕ್ಕೆ 3 ಎಕರೆಯಂತೆ ಅರಣ್ಯಭೂಮಿಯನ್ನು ಅರಣ್ಯೇತರ ಉದ್ದೇಶಕ್ಕೆ ಬಳಸಿಕೊಳ್ಳುವ ಉದ್ದೇಶವನ್ನು ದಾಖಲೆಯಲ್ಲಿ ಕೇಂದ್ರ ಸರ್ಕಾರದ ಅನುಮತಿಯ ಮೇರೆಗೆ ಮಾರ್ಪಡಿಸಿ ಅತಿಕ್ರಮಣದಾರರಿಗೆ ಮಂಜೂರಿ ಮಾಡುವ ದಿಶೆಯಲ್ಲಿ ರಾಜ್ಯ ಸರ್ಕಾರವು ಸ್ಪಷ್ಟವಾದ ಕ್ರಮವನ್ನು ಜರುಗಿಸಬೇಕು. ಅಲ್ಲದೇ ತಿರಸ್ಕøತಗೊಂಡಿರುವ ಅರ್ಜಿಗಳನ್ನು ಪುನರ್ ಪರಿಶೀಲನೆಗೆ ಅವಕಾಶ ಮಾಡಿಕೊಡಬೇಕೆಂದು ಆಗ್ರಹಿಸಿದರು. ಈ ವೇಳೆ ಪ್ರಮುಖರಾದ ಭೀಮಸಿ ದುಂಡಸಿ, ನೂರ್ ಅಹ್ಮದ್ ಸಯ್ಯದ್ ಸಾಬ್ ಉಪಸ್ಥಿತರಿದ್ದರು.

loading...