ನಂದಗಡದಲ್ಲಿ ಮುಷ್ಟಿ ಅಕ್ಕಿ ಅಭಿಯಾನ

0
29
loading...

ಕನ್ನಡಮ್ಮ ಸುದ್ದಿ-ಖಾನಾಪುರ: ಸಮೀಪದ ನಂದಗಡ ಗ್ರಾಮದಲ್ಲಿ ಭಾರತೀಯ ಜನತಾ ಪಕ್ಷದ ಕಿಸಾನ್‌ ಮೋರ್ಚಾ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಮುಷ್ಟಿ ಅಕ್ಕಿ ಅಭಿಯಾನಕ್ಕೆ ಪಕ್ಷದ ಕಿಸಾನ್‌ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ವಲ್ಲಭ ಗುಣಾಜಿ ಗ್ರಾಮಸ್ಥರಿಂದ ಅಕ್ಕಿಯನ್ನು ಭಿಕ್ಷೆಯ ರೂಪದಲ್ಲಿ ಪಡೆಯುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈಗಾಗಲೇ ಪ್ರಧಾನಿ ಮೋದಿ ನೇತೃತ್ವದಲ್ಲಿ ಪಕ್ಷ ದೇಶದಲ್ಲಿ ಉತ್ತಮ ಆಡಳಿತ ನೀಡುತ್ತಿದೆ. ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಚುನಾವಣೆಯಲ್ಲಿ ಪಕ್ಷವನ್ನು ಬೆಂಬಲಿಸುವ ಮೂಲಕ ಪ್ರಧಾನಿ ಮೋದಿ ಅವರ ಕೈಯನ್ನು ಬಲಪಡಿಸಬೇಕು ಎಂದು ಕೋರಿದರು.
ಅಭಿಯಾನ ಪ್ರಾರಂಭಿಸುವ ಮೊದಲು ಗ್ರಾಮದ ರಾಮ ಮಂದಿರದಲ್ಲಿ ಸೇರಿದ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಅಭಿಯಾನದ ರೂಪುರೇಷೆಯ ಬಗ್ಗೆ ಸಭೆ ನಡೆಸಿದರು. ಸಭೆಯಲ್ಲಿ ನಂದಗಡ ಜಿಪಂ ಕ್ಷೇತ್ರ ವ್ಯಾಪ್ತಿಯ ನಂದಗಡ, ಕಸಬಾ ನಂದಗಡ, ಹಲಸಿ, ಹೆಬ್ಬಾಳ, ಚಾಪಗಾಂವ, ನಂಜಿನಕೊಡಲ್‌ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಅಭಿಯಾನವನ್ನು ಕೈಗೊಳ್ಳಲು ಕಾರ್ಯಕರ್ತರಿಗೆ ಸೂಚಿಸಲಾಯಿತು. ಬಳಿಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಪಕ್ಷದ ಕಾರ್ಯಕರ್ತರು ಗ್ರಾಮಸ್ಥರಿಂದ ತಲಾ ಒಂದು ಮುಷ್ಟಿ ಅಕ್ಕಿಯನ್ನು ಸಂಗ್ರಹಿಸಿದರು. ಈ ಸಂದರ್ಭದಲ್ಲಿ ಪಕ್ಷದ ಬ್ಲಾಕ್‌ ಅಧ್ಯಕ್ಷ ವಿಠ್ಠಲ ಪಾಟೀಲ, ಮುಖಂಡರಾದ ಪ್ರಮೋದ ಕೊಚೇರಿ, ಬಾಬುರಾವ್‌ ದೇಸಾಯಿ, ಗಜಾನನ ರೇಮಾಣಿ, ರವಿ ಪೇಡನೆಕರ ಮತ್ತಿತರರು ಇದ್ದರು.

loading...