ಬೆಳಗಾವಿ ವಿಭಜನೆಗೆ ನನ್ನ ಸಹಮತವಿದೆ: ಸಿಎಂ ಸಿದ್ದು

0
43
loading...

ಕನ್ನಡಮ್ಮ ಸುದ್ದಿ-ಗೋಕಾಕ: ಬೆಳಗಾವಿ ಜಿಲ್ಲೆ 18 ವಿಧಾನಸಸಭಾ ಕ್ಷೇತ್ರಗಳನ್ನು ಹೊಂದಿರುವ ದೊಡ್ಡ ಜಿಲ್ಲೆಯಾಗಿದೆ. ಬೆಳಗಾವಿ ವಿಭಜನೆ ಮಾಡಲು ನನ್ನ ಸಹಮತವಿದೆ ಗೋಕಾಕ ಮತ್ತು ಚಿಕ್ಕೋಡಿ ಜಿಲ್ಲಾ ರಚನೆ ಕುರಿತು ಜಿಲ್ಲೆಯ ಸಂಸದರು, ಶಾಸಕರು ಸೇರಿದಂತೆ ಎಲ್ಲ ಪಕ್ಷಗಳ ಜನಪ್ರತಿನಿಧಿಗಳ ಜನಪ್ರತಿನಿಧಿಗಳನ್ನು ಸಭೆ ಕರೆದು ಚರ್ಚಿಸುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಅವರು, ಬೆಂಗಳೂರಿನ ಸಿಎಂ ಸಿದ್ಧರಾಮಯ್ಯ ಅವರ ಕಾರ್ಯಾಲಯದಲ್ಲಿ ಗೋಕಾಕ ಜಿಲ್ಲಾ ಹೋರಾಟ ಚಾಲನಾ ಸಮಿತಿ ನೇತ್ರತ್ವದ ನಿಯೋಗ ಸಿಎಂ ಸಿದ್ಧರಾಮಯ್ಯರನ್ನು ಭೇಟಿ ಮಾಡಿ ಗೋಕಾಕ ಜಿಲ್ಲಾ ಕೇಂದ್ರವನ್ನಾಗಿ ಮಾಡುವಂತೆ ಒತ್ತಾಯಿಸಿದರು. ಜಿಲ್ಲಾ ಹೋರಾಟ ಸಮಿತಿಯವರನ್ನು ಉದ್ಧೇಶಿಸಿ ಮಾತನಾಡಿ ಸಿಎಂ ಸಿದ್ಧರಾಮಯ್ಯ ಬೆಳಗಾವಿ ವಿಭಜಣೆ ಮಾಡಿ ಗೋಕಾಕ ಚಿಕ್ಕೋಡಿ ಜಿಲ್ಲಾ ಕೇಂದ್ರ ಮಾಡಲು ನನ್ನ ವಿರೋಧವಿಲ್ಲ. ಆದರೆ ಬೆಳಗಾವಿಯ ಸ್ಥಳೀಯ ಕೆಲ ರಾಜಕಾರಣಿಗಳು, ಕನ್ನಡಪರ ಸಂಘಟನೆಗಳು ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದು ಶೀಘ್ರವೇ ಎಲ್ಲ ಪಕ್ಷಗಳ ಜನಪ್ರತಿನಿಧಿಗಳನ್ನು ಸಭೆ ಕರೇದು ಚರ್ಚಿಸುತ್ತೆನೆ ಎಂದರು.
ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಗೋಕಾಕ ಜಿಲ್ಲಾ ಹೋರಾಟ ಚಾಲನಾ ಸಮಿತಿ ಅಧ್ಯಕ್ಷರು ಹಾಗೂ ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಸ್ವಾಮಿಜಿ, ನಗರಾಧ್ಯಕ್ಷ ತಳದಪ್ಪ ಅಮ್ಮಣಗಿ, ಜಿಪಂ ಸದಸ್ಯರಾದ ಟಿ ಆರ್ ಕಾಗಲ, ಮಡ್ಡೆಪ್ಪ ತೋಳಿನವರ, ರಾಜೇಂದ್ರ ಸಣ್ಣಕ್ಕಿ, ಮಾಜಿ ನಗರಾಧ್ಯಕ್ಷ ಎಸ್ ಎ ಕೋತವಾಲ, ಬಿಜೆಪಿ ಮುಖಂಡ ಅಶೋಕ ಪೂಜಾರಿ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಧರ ದೇಮಶೆಟ್ಟಿ, ಕನ್ನಡಪರ ಸಂಘಟನೆಗಳ ಅಧ್ಯಕ್ಷರಾದ ಬಸವರಾಜ ಖಾನಪ್ಪನವರ, ಕಿರಣ ಡಮಾಮಗರ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ನ್ಯಾಯವಾದಿಗಳ ಸಂಘದ ಸದಸ್ಯರು ಇದ್ದರು.

loading...