ಮಹಿಳಾ ಕಾನೂನಿನ ಬಗ್ಗೆ ಅರಿವು ಅವಶ್ಯ: ನ್ಯಾ.ಟಿ.ಗೋವಿಂದಯ್ಯ

0
14
loading...

ಕನ್ನಡಮ್ಮ ಸುದ್ದಿ-ಕಾರವಾರ: ಮಹಿಳೆಯರಿಗೆ ಪ್ರಸ್ತುತ ಮಹಿಳಾ ಕಾನೂನಿನ ಬಗ್ಗೆ ಅರಿವು ಮೂಡಿಸುವುದು ಅವಶ್ಯವಾಗಿದೆ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಟಿ. ಗೋವಿಂದಯ್ಯ ಹೇಳಿದರು.
ಅವರು ಗುರುವಾರ ಇಲ್ಲಿನ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾವಾದಿಗಳ ಸಂಘ ಮತ್ತು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾನೂನು ಅರಿವು ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರಸ್ತುತ ಮಹಿಳೆಯರು ಮಹಿಳಾ ಕಾನೂನಿನ ರಚನೆ, ಮತ್ತು ಅದರ ಆಶಯಗಳನ್ನು ತಿಳಿದುಕೊಳ್ಳುವುದು ಹಾಗೂ ಸಮಾಜದಲ್ಲಿ ಶೋಷಣೆಗೆ ಒಳಗಾದಾಗ ಅದರ ಮಹತ್ವವನ್ನು ಅರಿತು ಕೊಳ್ಳುವುದು ಅತೀ ಅವಶ್ಯವಾಗಿದೆ ಎಂದರು.
ಕಾರ್ಯಗಾರದಲ್ಲಿ ನ್ಯಾಯವಾದಿಗಳಾದ ಶುಭಾಗಾಂವಕರರವರು ಮಹಿಳೆ ಮತ್ತು ಕಾನೂನು, ರಾಜೇಶ್ವರಿ ವಿ. ನಾಯ್ಕರವರು ಪೊಲೀಸ್‌ ದೂರು ಪ್ರಾಧಿಕಾರ ಮತ್ತು ವ್ಯಕ್ತಿಯನ್ನು ಬಂಧಿಸಬೇಕಾದ ಸಮಯದಲ್ಲಿ ಅನುಸರಿಸಬೇÀ್ರಮಗಳು ಹಾಗೂ ರಾಜೇಶ್ವರಿ ಕೆ. ಬಿ ರವರು ಬಾಲ ನ್ಯಾಯ ಕಾಯಿದೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣೆ ಮತ್ತು ಸಂಧ್ಯಾ ಪಿ. ತಳೇಕರ ರವರು ಮೋಟಾರು ವಾಹನ ಕಾಯಿದೆ ಎಂಬ ವಿಷಯಗಳ ಮೇಲೆ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಸರಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನ ಪ್ರಾಶುಂಪಾಲರಾದ ವಿ.ಎಂ ಗಂಗೊಳ್ಳಿ ಸೇರಿದಂತೆ ಕಾಲೇಜಿನ ಸಿಬ್ಬಂಧಿ ವರ್ಗದವರು ಉಪಸ್ಥಿತರಿದ್ದರು.

loading...