ರಸ್ತೆ ಅಪಘಾತ: ಓರ್ವ ಸಾವು

0
24
loading...

ಕನ್ನಡಮ್ಮ ಸುದ್ದಿ-ಬೆಳಗಾವಿ: ತಾಲೂಕಿನ ಕೊಂಡಸಕೊಪ್ಪ ಕ್ರಾಸ್ ಹತ್ತಿರ ರಾಷ್ಟ್ರೀಯ ಹೆದ್ದಾರಿ ಮೇಲೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿ ನಿಂತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಸ್ಥಳದಲ್ಲಿಯೇ ಮೃತಪಟ್ಟು, ಚಾಲಕ ಗಂಭೀರ ಗಾಯಗೊಂಡ ಘಟನೆ ಶನಿವಾರ ನಡೆದಿದೆ.
ತಾಲೂಕಿನ ಬಸ್ಸಾಪೂರ ಗ್ರಾಮದ ಶಶಾಂಕ ಬಸಲಿಂಗಪ್ಪ ತಳವಾರ (15) ಮೃತ ಯುವಕ, ಬಸಲಿಂಗಪ್ಪ ಸಣ್ಣಯಲ್ಲಪ್ಪ ತಳವಾರ (48) ಬಲಗಾಲಿಗೆ ಗಂಭೀರ ಗಾಯವಾಗಿದೆ. ಈ ಕುರಿತು ಹಿರೇಬಾಗೇವಾಡಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

loading...