ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ: ಅರಣು ಸಿಂಗ್‌

0
16
loading...

ಕನ್ನಡಮ್ಮ ಸುದ್ದಿ-ವಿಜಯಪುರ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ, ಅಮಾಯಕರ ಮೇಲೆ ಹಲ್ಲೇ ನಡೆಯುತ್ತಿದ್ದರು, ರಾಜ್ಯ ಸರ್ಕಾರ ಕಣ್ಣುಮುಚ್ಚಿಕುಳಿತ್ತಿದೆ, ಅದಕ್ಕಾಗಿ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ತರುವ ನಿಟ್ಟಿನಲ್ಲಿ ಪ್ರತಿಯೊಬ್ಬ ಕಾರ್ಯಕರ್ತ ಶ್ರಮಿಸಬೇಕು ಎಂದು ರಾಷ್ಠ್ರೀಯ ಪ್ರಧಾನ ಕಾರ್ಯದರ್ಶಿ ಅರಣು ಸಿಂಗ್‌ ಜಿ. ಹೇಳಿದರು.
ನಗರದ ಪಾಂಚಜನ್ಯ ಸಭಾಂಗಣದಲ್ಲಿ ಭಾನುವಾರ ಬಬಲೇಶ್ವರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, 2018ರ ಕರ್ನಾಟಕ ವಿಧಾನ ಸಭಾ ಚುನಾವಣೆ ಇಡಿ ದೇಶದಲ್ಲಿ ಪ್ರತಿಷ್ಠೆಯ ಕಣವಾಗಿದ್ದು, ಬಿಜೆಪಿ ಈ ಬಾರಿ ರಾಜ್ಯದಲ್ಲಿ ಅಧಿಕಾರ ಹಿಡಿಯಲಿದೆ. ಈ ನಿಟ್ಟಿನಲ್ಲಿ ಇಲ್ಲಿ ಸೇರಿದ ಎಲ್ಲ ಕಾರ್ಯಕರ್ತರು ಬಬಲೇಶ್ವರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಬೇಕು ಎಂದರು.
ಕ್ಷೇತ್ರದಲ್ಲಿ ಗೊಂದಲಗಳಿಗೆ ಕೀವಿಗೊಡದೆ ಕೆಲಸ ಮಾಡಿ ಯಾರು ಏನೇ ಹೇಳಿದರೂ ತಲೆ ಕೆಡೆಸಿಕೊಳ್ಳದೆ ನಿಮ್ಮಗೆ ಕೊಟ್ಟ ಜವಾಬ್ದಾರಿಯನ್ನು ಪೂರ್ಣಗೊಳಿಸಿ ಎಂದು ಕಾರ್ಯಕರ್ತರಿಗೆ ಸೂಚನೆಯನ್ನು ನೀಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ವಿಠ್ಠಲ ಕಟಕದೊಂಡ ಮಾತನಾಡಿ, ಪ್ರಧಾನಿ ಮೋದಿ ಅವರ ಮಾಡಿರುವ ಅಭೂತಪೂರ್ವ ಸಾಧನೆಗಳನ್ನು ಜನರಿಗೆ ತಲಿಪಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸಿ, ಈ ಬಾರಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ತರಬೇಕು ಎಂದರು.
ವಿಧಾನ ಪರಿಷತ್‌ ಸದಸ್ಯ ಅರುಣ ಶಾಹಪುರ, ವಿಜುಗೌಡ ಪಾಟೀಲ, ಅಶೋಕ ಅಲ್ಲಾಪೂರ, ಪಾಂಡುಸಾಹುಕಾರ ದೊಡ್ಡಮನಿ, ಬಸವರಾಜ ಬಿರಾದಾರ, ವಿವೇಕ ಡಬ್ಬಿ, ಸಂಗರಾಜ ದೇಸಾಯಿ, ಜಿಲ್ಲಾ ಪಂಚಾಯತ್‌ ಸದಸ್ಯ ಸಾಬು ಮಾಶ್ಯಾಳ, ಕಲ್ಲಪ್ಪಾ ಕೊಡಬಾಗಿ, ಗುರು ಅಂಗಡಿ, ರಾಮು ಜಾಧವ, ವಿಜಯ ಕುಡಿಗನೂರ, ಸಂತೋಷ ಕುರದಡ್ಡಿ, ಎಪಿಎಮಸಿ ಸದಸ್ಯ ಸುರೇಶಗೌಡ ಬಿರಾದಾರ, ಚನ್ನಪ್ಪಾ ಕೊಪ್ಪದ, ಸಾಹೇಬಗೌಡ ಬಿರಾದಾರ, ಶಿವನಗೌಡ ಪಾಟೀಲ, ಸುರೇಶ ಚಿಕ್ಕಲ್ಲಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

loading...