ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಭಾರತಿ ಶೆಟ್ಟಿ

0
25
loading...

ಕನ್ನಡಮ್ಮ ಸುದ್ದಿಚಿಕ್ಕೋಡಿ 28: ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದ್ದು ಮಹಿಳೆಯರಿಗೆ ಸುರಕ್ಷತೆ ಇಲ್ಲದಂತಾಗಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಭಾರತಿ ಶೆಟ್ಟಿ ಅಕ್ರೋಶ ವ್ಯಕ್ತಪಡಿಸಿದರು.ರಾಯಬಾಗದಲ್ಲಿ ಹಮ್ಮಿಕೊಂಡ ಮಹಿಳಾ ಮೋರ್ಚಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜಾರಿಗೆ ತಂದಿರುವ ಭಾಗ್ಯಲಕ್ಷ್ಮೀ ಯೋಜನೆ ಸೇರಿದಂತೆ ಹಲವು ಯೋಜನೆಗಳನ್ನು ಅನುಷ್ಠಾನಕ್ಕೆ ತರುವಲ್ಲಿ ಕಾಂಗ್ರೆಸ್‌ ಸರಕಾರ ಪಕ್ಷ ಸಂಪೂರ್ಣ ವಿಫಲವಾಗಿದೆ. ಬರುವ ಚುನಾವಣೆಯಲ್ಲಿ ಮತ್ತೇ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲಿದ್ದು, ಹಿಂದಿನ ಬಿಜೆಪಿಯ ಅವಧಿಯ ಅಲ್ಲ ಯೋಜನೆಗಳನ್ನು ಅನುಷ್ಠಾನಕ್ಕೆ ತರುವುದಾಗಿ ತಿಳಿಸಿದರು.ಜಿಲ್ಲಾ ಬಿಜೆಪಿ ಅಧ್ಯಕ್ಷ ಶಶಿಕಾಂತ ನಾಯಕ್‌ ಅತಿಥಿಗಳಾಗಿ ಆಗಮಿಸಿ ರಾಜ್ಯದಲ್ಲಿ ಈ ಸಲ ಮೋದಿ ಅಲೆಯಿಂದ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿವೆ. ಜೊತೆಗೆ ರೈತಪರ,ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆಧ್ಯತೆಯನ್ನು ಬಿಜೆಪಿ ನೀಡಲಿದೆ ಎಂದರು.ಅಧ್ಯಕ್ಷತೆಯನ್ನು ಶಾಸಕ ಡಿ.ಎಂ.ಐಹೊಳೆ ವಹಿಸಿದ್ದರು.ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ಗೀತಾ ತೋರೆ(ಅಥಣಿ),ಅನ್ನಪೂರ್ಣಾ ಯರಡೆತ್ತಿನವರ(ಕುಡಚಿ),ಮಹಾದೇವಿ ಒಡೆಯರ(ಚಿಕ್ಕೋಡಿ),ಸುಕದೇವ ರಮಾಜೆ(ರಾಯಬಾಗ),ಕರೋಶಿ ಜಿ.ಪಂ ಸದಸ್ಯೆ ಲಕ್ಷ್ಮೀ ಕುರುಬರ, ಗೀತಾ ಭಾತೆ, ಸದಾನಂದ ಹಳಿಂಗಳಿ , ಮಹೇಶ ಭಾತೆ ಹಾಗೂ ಮಹಿಳಾ ಮೋರ್ಚಾ ಪದಾಧಿಕಾರಿಗಳು, ಕಾರ್ಯಕರ್ತೆಯರು ಉಪಸ್ಥಿತರಿದ್ದರು.

loading...